ಮುಂಬಯಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ದ್ವೇಷವನ್ನು ಹರಡುವ ಬೇಜವಾಬ್ದಾರಿ ಪಕ್ಷ ಎಂದು ಆರೋಪಿಸಿದರು.
ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗಳ ಯೋಜನೆಗಳನ್ನು ವರ್ಚುವಲ್ ಆಗಿ ಉದ್ಘಾಟಿಸಿದ ನಂತರ ಪ್ರಮಾತನಾಡಿದ ಪ್ರಧಾನಿ, “ಕಾಂಗ್ರೆಸ್ ಹಿಂದೂಗಳನ್ನು ವಿಭಜಿಸಲು ಬಯಸಿದೆ ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ, ಕಾಂಗ್ರೆಸ್ ಯಾವಾಗಲೂ ಮುಸ್ಲಿಮರಲ್ಲಿ ಭಯವನ್ನು ಉಂಟುಮಾಡುತ್ತದೆ ಮತ್ತು ಅವರನ್ನು ವೋಟ್ ಬ್ಯಾಂಕ್ ಆಗಿ ಪರಿಗಣಿಸುತ್ತದೆ” ಎಂದರು.
ಹರಿಯಾಣದಲ್ಲಿ ಮಂಗಳವಾರ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಪಕ್ಷವು 48 ಸ್ಥಾನಗಳನ್ನು ಗಳಿಸಿದೆ. ಭರ್ಜರಿ ವಿಜಯದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ 37 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು.
ಹರಿಯಾಣದ ಚುನಾವಣಾ ಫಲಿತಾಂಶವು ದೇಶದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ಬುಧವಾರ ಹೇಳಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.