ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತ ರಾಯಭಾರಿಗಳ ವಿರುದ್ಧ ಪ್ರಕರಣ ದಾಖಲಿಸುವ ಕೆನಡಾ ಸರ್ಕಾರದ ನಡೆಗೆ ಭಾರತ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದೆ.
ಅಲ್ಲದೇ ಈ ಪ್ರಕರಣದಲ್ಲಿ ಭಾರತೀಯ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕರು ತನಿಖೆಯಲ್ಲಿ “ಹಿತಾಸಕ್ತ ವ್ಯಕ್ತಿಗಳು” ಎಂದು ಸೂಚಿಸುವ ಕೆನಡಾ ಸಂವಹನವನ್ನು ತಿರಸ್ಕರಿಸಿದೆ. ಈ ವಿಚಾರವಾಗಿ ಕೆನಡಾದ ರಾಯಭಾರಿ ಕಚೇರಿ ಸಮರ್ಥನೆ, ಸ್ಪಷ್ಟನೆ ನೀಡಲು ಮುಂದಾಗಿದೆ. ಆದರೆ ಕೆನಡಾದ ಈ ನಡೆ ಭಾರತ ಮತ್ತು ಕೆನಡಾದ ಸಂಬಂಧವನ್ನು ಮತ್ತಷ್ಟು ಹಾನಿಗೀಡುಮಾಡುವ ಸಾಧ್ಯತೆ ಇದೆ.
ಕೆನಡಾ ಸರ್ಕಾರದ ಹೇಳಿಕೆಯನ್ನು ಅಸಂಬದ್ಧ ಎಂದು ಭಾರತೀಯ ರಾಯಭಾರ ಕಚೇರಿ ಅಧಿಕಾರಿ ಆರೋಪಿಸಿದೆ, ಇದು ಟ್ರುಡೊ ಸರ್ಕಾರದ ರಾಜಕೀಯ ಅಜೆಂಡಾ ಎಂದು ಪ್ರತಿಪಾದಿಸಿದೆ. ಅಲ್ಲದೇ ಕೆನಡಾ ಸರ್ಕಾರಕ್ಕೆ ಭಾರತ ಸರ್ಕಾರ ಹಲವಾರು ವಿನಂತಿಗಳನ್ನು ಸಲ್ಲಿಸಿದ್ದರೂ ಕೂಡ ಇದುವರೆಗೆ ಒಂದೇ ಒಂದು ಸಾಕ್ಷ್ಯವನ್ನು ಹಂಚಿಕೊಂಡಿಲ್ಲ ಎಂದು ಆರೋಪಿಸಿದೆ.
“ನಾವು ನಿನ್ನೆ ಕೆನಡಾದಿಂದ ರಾಜತಾಂತ್ರಿಕ ಸಂವಹನವನ್ನು ಸ್ವೀಕರಿಸಿದ್ದೇವೆ, ಆ ದೇಶದಲ್ಲಿನ ತನಿಖೆಗೆ ಸಂಬಂಧಿಸಿದ ವಿಷಯದಲ್ಲಿ ಭಾರತೀಯ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕರು ‘ಹಿತಾಸಕ್ತ ವ್ಯಕ್ತಿಗಳು’ ಎಂದು ಸೂಚಿಸಿರುವ ಅವರ ನಡೆ ಆಕ್ಷೇಪಾರ್ಹ. ಭಾರತ ಸರ್ಕಾರ ಈ ಅಸಂಬದ್ಧ ಆರೋಪಗಳನ್ನು ಬಲವಾಗಿ ತಿರಸ್ಕರಿಸುತ್ತದೆ ಮತ್ತು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿರುವ ಟ್ರುಡೊ ಸರ್ಕಾರದ ಅಜೆಂಡಾವನ್ನು ದಿಕ್ಕರಿಸುತ್ತದೆ ಎಂದು ಭಾರತದ ವಿದೇಶಾಂಗ ಇಲಾಖೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.