ನವದೆಹಲಿ: ವಸುಧೈವ ಕುಟುಂಬಕಂ ಎಂಬ ಶ್ರೀಮಂತ ಪರಂಪರೆಯನ್ನು ಹೊಂದಿರುವ ಭಾರತವು ಜಾಗತಿಕ ಗುಣಮಟ್ಟವನ್ನು ಅಳವಡಿಸಿಕೊಳ್ಳಲು ಬದ್ಧವಾಗಿದೆ ಎಂದು ಕೇಂದ್ರ ಸಂವಹನ ಖಾತೆ ರಾಜ್ಯ ಸಚಿವ ಡಾ.ಪೆಮ್ಮಸಾನಿ ಚಂದ್ರಶೇಖರ್ ಹೇಳಿದ್ದಾರೆ.
ಸೋಮವಾರ ಸಂಜೆ ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಜಾಗತಿಕ ಗುಣಮಟ್ಟ ವಿಚಾರ ಸಂಕಿರಣ (ಐಟಿಯು ಜಿಎಸ್ಎಸ್)ದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
“ಜಾಗತಿಕ ಗುಣಮಟ್ಟ ವಿಚಾರ ಸಂಕಿರಣ ಭವಿಷ್ಯಕ್ಕಾಗಿ ಭದ್ರ ಬುನಾದಿ ಹಾಕಿದ್ದು, ಮುಂಬರುವ ಪ್ರಗತಿಗಳಿಗೆ ಸ್ಪೂರ್ತಿದಾಯಕ ಧ್ವನಿಯನ್ನು ಹೊಂದಿಸುತ್ತದೆ. ದುರದೃಷ್ಟವಶಾತ್ ವಿಶ್ವದ ಜನಸಂಖ್ಯೆಯ ಮೂರನೇ ಭಾಗವು ಇನ್ನೂ ಸಂಪರ್ಕ ಹೊಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸರ್ಕಾರವು ಡಿಜಿಟಲ್ ಇಂಡಿಯಾದಂತಹ ಕಾರ್ಯಕ್ರಮಗಳ ಮೂಲಕ ತಂತ್ರಜ್ಞಾನದೊಂದಿಗೆ ಜನರನ್ನು ಸಂಪರ್ಕಿಸಲು ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ” ಎಂದು ಸಚಿವರು ಹೇಳಿದರು.
ಡಿಜಿಟಲ್ ಇಂಡಿಯಾ ಮಿಷನ್ನ ಭಾಗವಾಗಿ ಆರು ಲಕ್ಷ ಗ್ರಾಮಗಳು 4ಜಿ ಸಂಪರ್ಕ ಹೊಂದಿದ್ದು, ಇದು ದೇಶದ ಒಟ್ಟು ಗ್ರಾಮಗಳಲ್ಲಿ ಶೇ.95ರಷ್ಟು ಆಗಿದೆ ಎಂದು ಮಾಹಿತಿ ನೀಡಿದರು. ಎರಡು ಲಕ್ಷ ಗ್ರಾಮಗಳು ಈಗಾಗಲೇ ಆಪ್ಟಿಕಲ್ ಫೈಬರ್ನೊಂದಿಗೆ ಸಂಪರ್ಕ ಹೊಂದಿದ್ದು, 2027 ರ ವೇಳೆಗೆ ಉಳಿದ ಎಲ್ಲಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲಾಗುವುದು ಎಂದು ಪೆಮ್ಮಸಾನಿ ಚಂದ್ರಶೇಖರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.