ಗುವಾಹಟಿ: ಮಣಿಪುರದಲ್ಲಿನ ಜನಾಂಗೀಯ ಕಲಹಕ್ಕೆ ಪರಿಹಾರವನ್ನು ಕಂಡುಕೊಳ್ಳುವ ಸಲುವಾಗಿ ಮಂಗಳವಾರ ದೆಹಲಿಯಲ್ಲಿ ಪ್ರಮುಖ ಸಭೆ ನಡೆದಿದೆ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕಳೆದ ವರ್ಷ ಮೇ 3 ರಂದು ಮಣಿಪುರದಲ್ಲಿ ಬಹುಸಂಖ್ಯಾತ ಮೈಟೆ ಮತ್ತು ಅಲ್ಪಸಂಖ್ಯಾತ ಕುಕಿ ಸಮುದಾಯಗಳ ನಡುವೆ ಜನಾಂಗೀಯ ಸಂಘರ್ಷ ಸಂಭವಿಸಿದ ನಂತರ ಸರ್ಕಾರವು ಕರೆದ ಮೊದಲ ಪ್ರಮುಖ ಸಭೆ ಇದಾಗಿದೆ.
ಕುಕಿ, ಮೈಟೆ ಮತ್ತು ನಾಗ ಸಮುದಾಯಗಳನ್ನು ಪ್ರತಿನಿಧಿಸುವ ಮಣಿಪುರ ಅಸೆಂಬ್ಲಿಯ ಚುನಾಯಿತ ಸದಸ್ಯರ ಗುಂಪು ಈಶಾನ್ಯ ರಾಜ್ಯದ ಪ್ರಸ್ತುತ ಸನ್ನಿವೇಶದ ಬಗ್ಗೆ ಚರ್ಚಿಸಲು ಸಭೆಯಲ್ಲಿ ಭಾಗಿಯಾಗಿದೆ. ಹಿಂಸಾಚಾರದ ಹಾದಿಯನ್ನು ದೂರವಿಡುವ ಸಲುವಾಗಿ ಎಲ್ಲಾ ಸಮುದಾಯಗಳ ಜನರನ್ನು ಪ್ರೇರೇಪಿಸಲು ಸಭೆಯಲ್ಲಿ ಭಾಗಿಯಾದ ಎಲ್ಲರೂ ಸರ್ವಾನುಮತದಿಂದ ನಿರ್ಧರಿಸಿದ್ದಾರೆ.
ಸಭೆಯನ್ನು ಇಂಟೆಲಿಜೆನ್ಸ್ ಬ್ಯೂರೋ ನಡೆಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದನ್ನು ಮೇಲ್ವಿಚಾರಣೆ ಮಾಡಿದರು.
ಸಭೆಯಲ್ಲಿ ಪಾಲ್ಗೊಂಡ ಕುಕಿ- ಝೋ ಶಾಸಕರು ಪ್ರತ್ಯೇಕ ಕೇಂದ್ರಾಡಳಿತವನ್ನು ಸ್ಥಾಪಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ ಈ ಬೇಡಿಕೆಯನ್ನು ಈಡೇರಿಸುವ ಮೊದಲು ಶಾಂತಿಯ ಬಗ್ಗೆ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಈ ಸಭೆಯಲ್ಲಿ ಅಂತಿಮವಾಗಿ ಯಾವ ನಿರ್ಧಾರಕ್ಕೆ ಬರಲಾಯಿತು ಎಂಬ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲಾಗಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.