ಮಂಗಳೂರು: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ನೈರುತ್ಯ ರೈಲ್ವೆಯು ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಯಶವಂತಪುರ-ಮಂಗಳೂರು(06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ. ಹಾಗೆಯೇ ಮಂಗಳೂರು-ಯಶವಂತಪುರ(ನಂ. 06566) ವಿಶೇಷ ರೈಲು ಮಂಗಳೂರಿನಿಂದ ಅ.31ರಂದು ಮಧ್ಯಾಹ್ನ 1 ಗಂಟೆಗೆ ಹೊರಟು ಅದೇ ದಿನ ರಾತ್ರಿ 9.15ಕ್ಕೆ ಯಶವಂತಪುರ ತಲುಪಲಿದೆ.
ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ಹಿನ್ನೆಲೆಯಲ್ಲಿ ಈ ರೈಲು ಸಂಚಾರ ಸಾಕಷ್ಟು ಪ್ರಯೋಜನ ನೀಡಲಿದೆ.
Glad to inform all that our request for a Special Train from Bangalore to Mangalore during Deepavali festival has been swiftly responded to and been sanctioned by South Western Railways.
This will facilitate travel for a large number of passengers who travel back home to… pic.twitter.com/zCKlWfI6wh
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) October 17, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.