ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಸೀಟು ಹಂಚಿಕೆ ಯೋಜನೆ ಕುರಿತು ಚರ್ಚಿಸಲು ಮಹಾರಾಷ್ಟ್ರದ ಆಡಳಿತದಲ್ಲಿರುವ ಸಮ್ಮಿಶ್ರ ಮಹಾಯುತಿ ಮೈತ್ರಿ ನಾಯಕರು ಶುಕ್ರವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮಾತುಕತೆಗಳು ನಿರ್ಣಾಯಕ ಹಂತದಲ್ಲಿರುವ ಸಮಯದಲ್ಲಿ ಶಾ ಮತ್ತು ಮಹಾಯುತಿ ನಾಯಕರ ನಡುವೆ ತಡರಾತ್ರಿಯ ಸಭೆ ನಡೆದಿದೆ. ಶಿವಸೇನೆಯಿಂದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಬಿಜೆಪಿಯಿಂದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ದೆಹಲಿಯಲ್ಲಿ ಶಾ ಅವರನ್ನು ಭೇಟಿಯಾದರು.
ಚಂಡೀಗಢದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎನ್ಡಿಎ ಮುಖ್ಯಮಂತ್ರಿಗಳ ಸಭೆಯ ನೇಪಥ್ಯದಲ್ಲಿ ಗೃಹ ಸಚಿವರು ಶಿಂಧೆ ಅವರೊಂದಿಗೆ ಮುಖಾಮುಖಿ ಸಂಭಾಷಣೆ ನಡೆಸಿದರು ಎನ್ನಲಾಗಿದೆ.
105 ಸ್ಥಾನಗಳಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿರುವ ಬಿಜೆಪಿ, ಸೀಟು ಹಂಚಿಕೆ ಯೋಜನೆಯಲ್ಲಿ ಪ್ರಮುಖನಾಗಿದೆ. ಒಟ್ಟು 288 ಸ್ಥಾನಗಳಲ್ಲಿ ಕನಿಷ್ಠ 155 ಸ್ಥಾನಗಳಲ್ಲಿ ಇದು ಸ್ಪರ್ಧಿಸಲಿದೆ ಮತ್ತು ಉಳಿದವುಗಳನ್ನು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ನಡುವೆ ಹಂಚಿಕೊಳ್ಳಲಾಗುತ್ತದೆ. ನವೆಂಬರ್ 20 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶತಾಯ ಗತಾಯ ಅಧಿಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಇವುಗಳ ಪ್ರಯತ್ನ ಸಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.