ನವದೆಹಲಿ: ಮಹಿಳೆಯರ ಆಶೀರ್ವಾದವು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದನ್ನು ಮುಂದುವರಿಸಲು ಸದಾ ಪ್ರೇರೇಪಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಒಡಿಶಾದ ಸುಂದರ್ಗಢ್ ಜಿಲ್ಲೆಯಲ್ಲಿ ನಡೆದ ಬಿಜೆಪಿ ಸದಸ್ಯತಾ ಅಭಿಯಾನದ ವೇಳೆ ಬುಡಕಟ್ಟು ಮಹಿಳೆಯೊಬ್ಬರು ಮೋದಿಗೆ ಆಶೀರ್ವದಿಸಿ 100 ರೂಪಾಯಿಗಳನ್ನು ನೀಡಿದ್ದಾರೆ. ಈ ದೃಶ್ಯವನ್ನು ಬಿಜೆಪಿ ನಾಯಕ ಬೈಜಯಂತ್ ಪಾಂಡ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
“ಈ ಆದಿವಾಸಿ ಮಹಿಳೆ ಪ್ರಧಾನಿ ನರೇಂದ್ರ ಮೋದಿಯವರಿಗೆ ‘ಧನ್ಯವಾದಗಳನ್ನು ತಿಳಿಸಲು’ ನನಗೆ 100 ರೂಪಾಯಿಗಳನ್ನು ನೀಡಬೇಕೆಂದು ಒತ್ತಾಯಿಸಿದರು. ಹಣ ನೀಡುವ ಅಗತ್ಯವಿಲ್ಲ ಎಂದು ನಾನು ಎಷ್ಟೇ ಹೇಳಿದರೂ ಆಕೆ ಕೇಳಲಿಲ್ಲ” ಎಂದು ಪಾಂಡ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಮೋದಿ, “ಈ ವಾತ್ಸಲ್ಯದಿಂದ ತುಂಬಾ ತಟ್ಟಿದೆ. ಸದಾ ನನ್ನನ್ನು ಆಶೀರ್ವದಿಸುತ್ತಿರುವುದಕ್ಕಾಗಿ ನಮ್ಮ ನಾರಿ ಶಕ್ತಿಗೆ ನಾನು ನಮಸ್ಕರಿಸುತ್ತೇನೆ. ಅವರ ಆಶೀರ್ವಾದವು ನನಗೆ ವಿಕಸಿತ ಭಾರತವನ್ನು ನಿರ್ಮಿಸಲು ಕೆಲಸ ಮಾಡಲು ಪ್ರೇರೇಪಿಸುತ್ತದೆ.
Very touched by this affection. I bow to our Nari Shakti for always blessing me. Their blessings inspire me to keep working to build a Viksit Bharat. https://t.co/Iw8m51zagY
— Narendra Modi (@narendramodi) October 19, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.