ನವದೆಹಲಿ: 2020 ರಿಂದ ಉದ್ಭವಗೊಂಡಿರುವ ಗಡಿ ಬಿಕ್ಕಟ್ಟನ್ನು ಪರಿಹರಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ. ಈ ಕುರಿತು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಅನೇಕ ಸುತ್ತಿನ ಮಾತುಕತೆಗಳ ನಂತರ, ವಿವಾದಾತ್ಮಕ ಅಂಶಗಳಿಂದ ಹೊರಬರಲು ಎರಡೂ ದೇಶಗಳು ಒಪ್ಪಿಕೊಂಡಿವೆ. ಪೂರ್ವ ಲಡಾಖ್ನಲ್ಲಿ ವಾಸ್ತವಿಕ ನಿಯಂತ್ರಣ ರೇಖೆ (ಎಲ್ಎಸಿ) ಉದ್ದಕ್ಕೂ ಗಸ್ತು ತಿರುಗುವ ಕುರಿತು ಭಾರತ ಮತ್ತು ಚೀನಾದ ಸಮಾಲೋಚಕರು ಒಪ್ಪಂದಕ್ಕೆ ಬಂದಿದ್ದಾರೆ ಎಂದಿದ್ದಾರೆ.
“ಕಳೆದ ಹಲವಾರು ವಾರಗಳಿಂದ ನಡೆದ ಚರ್ಚೆಗಳ ಪರಿಣಾಮವಾಗಿ, ಭಾರತ-ಚೀನಾ ಗಡಿ ಪ್ರದೇಶದಲ್ಲಿ ನಿಜವಾದ ನಿಯಂತ್ರಣದ ರೇಖೆಯ ಉದ್ದಕ್ಕೂ ಗಸ್ತು ವ್ಯವಸ್ಥೆಗಳ ಕುರಿತು ಒಪ್ಪಂದಕ್ಕೆ ಬರಲಾಗಿದೆ ಮತ್ತು ಇದು ಉಭಯ ಸೈನಿಕರಿಗೆ ತೊಡಗಿಸಿಕೊಳ್ಳು ಅನುವು ನೀಡುತ್ತದೆ ಮತ್ತು ಅಂತಿಮವಾಗಿ 2020 ರಲ್ಲಿ ಈ ಪ್ರದೇಶಗಳಲ್ಲಿ ಉದ್ಭವಿಸಿದ ಸಮಸ್ಯೆಗಳ ಪರಿಹಾರಕ್ಕೆ ನಾಂದಿಹಾಡುತ್ತದೆ “ಎಂದು ಮಿಸ್ರಿ ಹೇಳಿದ್ದಾರೆ.
ಉಳಿದ ಸಮಸ್ಯೆಗಳನ್ನು ಪರಿಹರಿಸಲು ಕಳೆದ ಕೆಲವು ವಾರಗಳಿಂದ ಭಾರತ ಮತ್ತು ಚೀನಾದ ಸಮಾಲೋಚಕರು ಸಂಪರ್ಕದಲ್ಲಿದ್ದಾರೆ. ಈಗ ನಡೆದ ಒಪ್ಪಂದವು ಡೆಪ್ಸಾಂಗ್ ಮತ್ತು ಡೆಮ್ಚೋಕ್ ಪ್ರದೇಶಗಳಲ್ಲಿ ಗಸ್ತು ತಿರುಗುವುದಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ. ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಕಜಾನ್ ನಗರಕ್ಕೆ ಪ್ರಯಾಣಿಸುವ ಒಂದು ದಿನ ಮುಂಚಿತವಾಗಿ ಈ ಬೆಳವಣಿಗೆ ನಡೆದಿದೆ.
ಗಾಲ್ವಾನ್ ಕಣಿವೆಯಲ್ಲಿ ಹಿಂಸಾತ್ಮಕ ಘರ್ಷಣೆಯ ನಂತರ ಜೂನ್ 2020 ರಿಂದ ಭಾರತ ಮತ್ತು ಚೀನಾದ ಸೇನೆಗಳ ನಡುವಿನ ಬಿಕ್ಕಟ್ಟು ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.