ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ 16 ನೇ ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ ಕಜಾನ್ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ರಷ್ಯಾ-ಉಕ್ರೇನ್ ಸಂಘರ್ಷವನ್ನು ಶಾಂತಿಯುತ ರೀತಿಯಲ್ಲಿ ಪರಿಹರಿಸಬೇಕು ಎಂಬ ಭಾರತದ ನಿಲುವನ್ನು ಪುನರುಚ್ಚರಿಸಿದರು. ಮಾನವೀಯ ಪ್ರಯತ್ನಗಳಿಗೆ ಆದ್ಯತೆಯೊಂದಿಗೆ ಶಾಂತಿ ಮತ್ತು ಸ್ಥಿರತೆಯತ್ತ ಮರಳುವಿಕೆಯನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸುತ್ತದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸಾಧ್ಯವಿರುವ ಎಲ್ಲ ಸಹಕಾರ ನೀಡಲು ಭಾರತ ಸಿದ್ಧವಿದೆ ಎಂದು ತಿಳಿಸಿದ್ದಾರೆ.
ಇತ್ತೀಚಿನ ರಷ್ಯಾ ಭೇಟಿಗಳು ಉಭಯ ದೇಶಗಳ ನಿಕಟ ಸಮನ್ವಯ ಮತ್ತು ಆಳವಾದ ಸ್ನೇಹವನ್ನು ಪ್ರತಿಬಿಂಬಿಸುತ್ತವೆ ಎಂದ ಮೋದಿ, ಭಾರತವು ಈ ನಗರದೊಂದಿಗೆ ಆಳವಾದ ಮತ್ತು ಐತಿಹಾಸಿಕ ಸಂಬಂಧವನ್ನು ಹೊಂದಿದೆ ಮತ್ತು ಕಜಾನ್ನಲ್ಲಿ ಭಾರತದ ಹೊಸ ದೂತಾವಾಸವನ್ನು ತೆರೆಯುವುದರಿಂದ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಅಭಿಪ್ರಾಯಿಸಿದರು.
ಅಲ್ಲದೇ ಬ್ರಿಕ್ಸ್ 15 ವರ್ಷಗಳಲ್ಲಿ ತನ್ನ ವಿಶೇಷ ಗುರುತನ್ನು ಸೃಷ್ಟಿಸಿದೆ ಮತ್ತು ಈಗ ವಿಶ್ವದ ಅನೇಕ ದೇಶಗಳು ಗುಂಪಿಗೆ ಸೇರಲು ಬಯಸುತ್ತವೆ ಎಂದು ಅವರು ಹೇಳಿದರು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಜಾನ್ನಲ್ಲಿ ತನ್ನ ದೂತಾವಾಸವನ್ನು ತೆರೆಯುವ ಭಾರತೀಯ ನಿರ್ಧಾರವನ್ನು ಸ್ವಾಗತಿಸಿದ್ದಾರೆ, ಇದು ಸ್ವಾಗತಾರ್ಹ ಹೆಜ್ಜೆಯಾಗಿದೆ ಎಂದಿದ್ದಾರೆ.
ಇದಕ್ಕೂ ಮುನ್ನ ಕಜಾನ್ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಸಾಮಾಜಿಕ ಮಾಧ್ಯಮದ ಪೋಸ್ಟ್ನಲ್ಲಿ, ಪ್ರಧಾನಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಭಾರತೀಯ ಸಮುದಾಯವು ತಮ್ಮ ಸಾಧನೆಗಳಿಂದ ವಿಶ್ವದಾದ್ಯಂತ ತನ್ನನ್ನು ತಾನು ಗುರುತಿಸಿಕೊಂಡಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.