ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಯಾದ ಬಳಿಕ ಸರಣಿ ಭಯೋತ್ಪಾದನಾ ದಾಳಿಗಳು ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು, ಜಮ್ಮು ಮತ್ತು ಕಾಶ್ಮೀರ ಎಂದಿಗೂ ಪಾಕಿಸ್ತಾನದ ಭಾಗವಾಗುವುದಿಲ್ಲ ಮತ್ತು ಈ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುವುದನ್ನು ಪಾಕಿಸ್ಥಾನ ನಿಲ್ಲಿಸಬೇಕು ಎಂದಿದ್ದಾರೆ.
ಅಲ್ಲದೇ ಉಭಯ ದೇಶಗಳ ನಡುವಣ ಸಮಸ್ಯೆಗೆ ಪರಿಹಾರ ಸಿಗುವವರೆಗೂ ಇಂತಹ ದಾಳಿಗಳು ನಿಲ್ಲುವ ಸೂಚನೆ ಇಲ್ಲ. ಇಂತಹ ದಾಳಿಗಳನ್ನು ಕಳೆದ 30 ವರ್ಷಗಳಿಂದ ನೋಡುತ್ತಾ ಬರುತ್ತಿದ್ದೇನೆ ಎಂದು ಹೇಳಿದ್ದಾರೆ.
“ಮುಗ್ಧರನ್ನು ಕೊಲ್ಲಲಾಗುತ್ತಿದೆ ಮತ್ತು ನಾವು ಎಂದಿಗೂ ಪಾಕಿಸ್ತಾನದ ಭಾಗವಾಗುವುದಿಲ್ಲ. ಹಾಗಾದರೆ ಅವರು ಇದನ್ನು ಏಕೆ ಮಾಡುತ್ತಿದ್ದಾರೆ? ಇದು ನಮ್ಮ ಭವಿಷ್ಯವನ್ನು ಹಾಳುಮಾಡುತ್ತದಲ್ಲವೇ?” ಎಂದು ಫಾರೂಕ್ ಪ್ರಶ್ನಿಸಿದ್ದಾರೆ.
ಪಾಕಿಸ್ತಾನ ತನ್ನ ದೇಶದತ್ತ ಗಮನ ಹರಿಸಬೇಕು, ತನ್ನದೇ ಆದ ಅಭಿವೃದ್ಧಿಯನ್ನು ನೋಡಬೇಕು ಮತ್ತು ಅದನ್ನು ಸುಧಾರಿಸಲು ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.
“ಖುದ್ ಬರ್ಬಾದ್ ಹೋ ರಹೇ ಹೈ ಔರ್ ಹುಮೇ ಭಿ ಸಾಥ್ ಬರ್ಬಾದ್ ಕರ್ ರಹೇ ಹೈ (ಪಾಕಿಸ್ತಾನ ತನ್ನನ್ನು ತಾನು ನಾಶಪಡಿಸಿಕೊಳ್ಳುತ್ತಿದೆ ಮತ್ತು ನಮ್ಮನ್ನೂ ನಾಶ ಮಾಡಲು ಪ್ರಯತ್ನಿಸುತ್ತುಇದೆ) ಈ ಭಯೋತ್ಪಾದನೆಯನ್ನು ನಿಲ್ಲಿಸಿ ಸ್ನೇಹದ ಹಾದಿಯನ್ನು ಹುಡುಕುವಂತೆ ನಾನು ಅವರಿಗೆ ಕೇಳಿಕೊಳ್ಳುತ್ತೇನೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.