ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು “ಸಂಘಟನಾ ಪರ್ವ” ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ವಿಧಾನಸಭಾ ಕ್ಷೇತ್ರದಲ್ಲಿ ಗರಿಷ್ಠ ಸಂಖ್ಯೆಯ ಸದಸ್ಯತ್ವ ಮಾಡಿ ದೇಶದಲ್ಲೇ ನಂಬರ್ 1 ಸದಸ್ಯತ್ವ ಸಾಧನೆಗಾಗಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಗೌರವಿಸಲಾಯಿತು.
ಎಸ್.ಆರ್.ವಿಶ್ವನಾಥ್ ಅವರು 2 ಲಕ್ಷದ 15 ಸಾವಿರ ಬಿಜೆಪಿ ಸದಸ್ಯರನ್ನು ನೋಂದಣಿ ಮಾಡಿದ್ದರು. ಇದೇವೇಳೆ ಮಾತನಾಡಿದ ಎಸ್.ಆರ್.ವಿಶ್ವನಾಥ್ ಅವರು ಈ ಕೆಲಸ ಮಾಡಲು ಸ್ಫೂರ್ತಿ ನೀಡಿದವರು ಕಾರ್ಯಕರ್ತರು ಎಂದು ತಿಳಿಸಿದರು. ಕಾರ್ಯಕರ್ತರು ನಿಸ್ವಾರ್ಥ ಸೇವೆ ಮಾಡಿ ಮನೆ ಮನೆ ಸಂಪರ್ಕ ಮಾಡಿದ ಅಭಿಯಾನ ಇದು; ಅದರಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದು ವಿವರಿಸಿದರು.
ರಾಜ್ಯ ಸಹ ಪ್ರಭಾರಿ ಸುಧಾಕರ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪಿ.ರಾಜೀವ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯ ಮತ್ತು ಸಂಘಟನಾ ಪರ್ವದ ಚುನಾವಣಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಪಕ್ಷದ ಪ್ರಮುಖರು ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.