ವಾಷಿಂಗ್ಟನ್: ಅಮೆರಿಕ ತನ್ನ 47 ನೇ ಅಧ್ಯಕ್ಷರನ್ನು ಆಯ್ಕೆ ಮಾಡಲು ನಾಳೆ ಮತ ಚಲಾಯಿಸಲು ಸಜ್ಜಾಗಿದೆ. ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ನಾಯಕಿ ಕಮಲಾ ಹ್ಯಾರಿಸ್ ನಡುವಿನ ತೀವ್ರ ಪೈಪೋಟಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆ ವಿಶ್ವದ ಗಮನ ಸೆಳೆದಿದೆ. ಇಬ್ಬರೂ ಅಭ್ಯರ್ಥಿಗಳು ಮತದಾರರನ್ನು ಗೆಲ್ಲಲು ಶತಾಯ ಗತಾಯ ಪ್ರಯತ್ನಗಳನ್ನು ನಡೆಸಿದ್ದಾರೆ.
ಅರಿಜೋನಾ, ನೆವಾಡಾ, ವಿಸ್ಕಾನ್ಸಿನ್, ಮಿಚಿಗನ್, ಪೆನ್ಸಿಲ್ವೇನಿಯಾ, ಉತ್ತರ ಕೆರೊಲಿನಾ ಮತ್ತು ಜಾರ್ಜಿಯ ರಾಜ್ಯಗಳಲ್ಲಿನ ಮತಗಳು ಫಲಿತಾಂಶವನ್ನು ನಿರ್ಧರಿಸುತ್ತದೆ ಎಂದು ಇತ್ತೀಚಿನ ಸಮೀಕ್ಷೆಗಳು ಸೂಚಿಸುತ್ತವೆ.
ಡೊನಾಲ್ಡ್ ಟ್ರಂಪ್ ಗೆ, 2ನೇ ಬಾರಿ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗುವ ಹುರುಪಿನಲ್ಲಿದ್ದರೆ, ಇನ್ನೊಂದೆಡೆ ಕಮಲಾ ಹ್ಯಾರಿಸ್ ಗೆದ್ದು ಅಮೆರಿಕಾದ ಮೊದಲ ಮಹಿಳಾ ಅಧ್ಯಕ್ಷೆ ಎಂಬ ಇತಿಹಾಸ ನಿರ್ಮಿಸುವ ತವಕದಲ್ಲಿದ್ದಾರೆ.
ನವೆಂಬರ್ 5ಕ್ಕೆ ಅಮೆರಿಕದ ಚುನಾವಣೆ ಮುಕ್ತಾಯವಾಗಲಿದೆ. ನಂತರ ಒಂದು ದಿನದ ಅಂತರದಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಕೂಡ ಹೊರ ಬೀಳಲಿದೆ. ಚುನಾವಣೆ ಮುಗಿಯಲು ಕೌಂಟ್ಡೌನ್ ಶುರುವಾಗಿರುವ ಸಮಯದಲ್ಲೇ, ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್ ಮತದಾರರನ್ನು ಓಲೈಸಲು ಅಂತಿ ಪ್ರಯತ್ನ ನಡೆಸುತ್ತಿದ್ದಾರೆಎ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.