ಬೆಂಗಳೂರು: ಕರ್ನಾಟಕದ ಕೆಲವು ಭಾಗಗಳಲ್ಲಿನ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ.
ಸಿದ್ದರಾಮಯ್ಯ ಸರ್ಕಾರದ ಕುಮ್ಮಕ್ಕಿನಿಂದ ರೈತರು, ಶೋಷಿತರು ಹಾಗೂ ಮಠಮಾನ್ಯಗಳ ಆಸ್ತಿಗಳನ್ನೆಲ್ಲಾ ವಕ್ಫ್ ಬೋರ್ಡ್ ಅಕ್ರಮವಾಗಿ ಕಬಳಿಸುತ್ತಿದೆ. ಕಾಂಗ್ರೆಸ್ನ ಈ ಹುನ್ನಾರದ ವಿರುದ್ದ ವಕ್ಫ್ಗೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಶನ್ ವಾಪಸ್ ಪಡೆಯುವಂತೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಸರ್ಕಾರವು “ಲ್ಯಾಂಡ್ ಜಿಹಾದ್” ನಲ್ಲಿ ತೊಡಗಿದೆ ಎಂದು ಆರೋಪಿಸಿರುವ ಬಿಜೆಪಿ, ರೈತರಿಗೆ ನೀಡಿರುವ ಎಲ್ಲಾ ನೋಟಿಸ್ಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದೆ. ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿದೆ.
“ಜಮೀರ್ ಅಹಮದ್ ಎಂಬ ದೇಶದ್ರೋಹಿ, ರೈತ ವಿರೋಧಿ ಸಚಿವರನ್ನು ಮುಂದಿಟ್ಟುಕೊಂಡು, ಜಿಲ್ಲಾಧಿಕಾರಿ, ಅಧಿಕಾರಿಗಳನ್ನು ಬೆದರಿಸಿ ರೈತರ ಜಮೀನುಗಳನ್ನು ಕಾಂಗ್ರೆಸ್ ಸರ್ಕಾರ ಕಬಳಿಸುತ್ತಿದೆ. ಸಂಸತ್ತಿನಲ್ಲಿ ರಚನೆಯಾಗಿರುವ ಪಾರ್ಲಿಮೆಂಟ್ ಸಮಿತಿ ವಕ್ಫ್ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಭಯದಿಂದ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ರೈತರ,ದಲಿತರ, ಮಠ ಮಂದಿರಗಳ ಭೂಮಿ ಕಬಳಿಸುತ್ತಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.
ಅಲ್ಲದೇ ಸಿದ್ದರಾಮಯ್ಯ ಸರ್ಕಾರ ರೈತರಿಗೆ ನೀಡಿರುವ ವಕ್ಫ್ ನೋಟಿಸ್ ವಿಚಾರದಲ್ಲೂ ಗೊಂದಲ ಮೂಡಿಸಿದೆ. ಆದರೆ ಕಾಂಗ್ರೆಸ್ ಅಧಿಕಾರಾವಧಿಯಲ್ಲೇ ಮುಗ್ಧ ರೈತರ ಜಮೀನಿನ ದಾಖಲೆಗೆ ವಕ್ಫ್ ಹೆಸರು ಕಾಣಿಸಿಕೊಂಡಿದ್ದು ಹೇಗೆ ? ನೋಟಿಸ್ ಕೊಟ್ಟಿದ್ದು ಏಕೆ ? ಈಗ ವಾಪಸ್ ಪಡೆಯುತ್ತೇವೆ ಎನ್ನುವುದೇಕೆ ? ಇಂತಹ ಹೇಳಿಕೆ ನೀಡುವುದು ಮೊಸಳೆ ಕಣ್ಣೀರಿನಂತೆ ಎಂಬುದನ್ನು ಅರಿಯದಷ್ಟು ಮುಗ್ಧರಲ್ಲ ನಮ್ಮ ರೈತರು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.