ನವದೆಹಲಿ: 11 ಭಾಷೆಗಳನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸಿರುವ ವಿಶ್ವದ ಏಕೈಕ ದೇಶ ಭಾರತ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸೋಮವಾರ ನವದೆಹಲಿಯಲ್ಲಿ ನಡೆದ ಕೇಂದ್ರೀಯ ಹಿಂದಿ ಸಮಿತಿಯ 32ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಕೇಂದ್ರೀಯ ಹಿಂದಿ ಸಮಿತಿ’ ಹಿಂದಿ ಭಾಷೆಯ ಅಭಿವೃದ್ಧಿ ಮತ್ತು ಪ್ರಚಾರಕ್ಕಾಗಿ ಮಾರ್ಗಸೂಚಿಗಳನ್ನು ಒದಗಿಸುವ ಅತ್ಯುನ್ನತ ಸಂಸ್ಥೆಯಾಗಿದೆ ಎಂದರು.
ಹಿಂದಿಯನ್ನು ಬಲಪಡಿಸಲು ಎರಡು ಪ್ರಮುಖ ಉಪಕ್ರಮಗಳನ್ನು ಕೈಗೊಳ್ಳುವ ಅಗತ್ಯವನ್ನು ಶಾ ಒತ್ತಿ ಹೇಳಿದರು. ಮೊದಲನೆಯದು ಹಿಂದಿ ಸಾಹಿತ್ಯ ಮತ್ತು ಅದರ ವಿವಿಧ ವ್ಯಾಕರಣ ರೂಪಗಳ ವರ್ಧನೆ, ಸಂರಕ್ಷಣೆ ಮತ್ತು ದೀರ್ಘಾಯುಷ್ಯಕ್ಕಾಗಿ ದೀರ್ಘಾವಧಿಯ ನೀತಿಯನ್ನು ಅಭಿವೃದ್ಧಿಪಡಿಸುವುದು. ಇದರೊಂದಿಗೆ ಎಲ್ಲಾ ಆಧುನಿಕ ಶಿಕ್ಷಣ ಪಠ್ಯಕ್ರಮವನ್ನು ಹಿಂದಿ ಮತ್ತು ಇತರ ಎಲ್ಲಾ ಭಾರತೀಯ ಭಾಷೆಗಳಿಗೆ ಭಾಷಾಂತರಿಸುವುದು ಅಗತ್ಯವಾಗಿದೆ ಎಂದು ಗೃಹ ಸಚಿವರು ಹೇಳಿದರು.
ಇನ್ನೂ ಐದು ಭಾರತೀಯ ಭಾಷೆಗಳಿಗೆ ಇತ್ತೀಚೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಿರುವುದನ್ನು ಉಲ್ಲೇಖಿಸಿದ ಶಾ, ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಭಾಷೆಗಳ ಸಂರಕ್ಷಣೆ, ಪ್ರಚಾರ ಮತ್ತು ವ್ಯಾಪಕ ಬಳಕೆಗಾಗಿ ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಹೇಳಿದರು. ಈ ಪ್ರಯತ್ನಗಳು 2014 ರಿಂದ 2024 ರ ಅವಧಿಯನ್ನು ಭಾರತೀಯ ಭಾಷೆಗಳ ರಕ್ಷಣೆ ಮತ್ತು ಪ್ರಚಾರಕ್ಕೆ ಮೀಸಲಾದ ಯುಗವನ್ನಾಗಿ ಮಾಡಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಡಾ.ಎಲ್.ಮುರುಗನ್ ಇತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.