ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಸತತ 2 ಗಂಟೆಗಳ ಕಾಲ ವಿಚಾರಣೆ ನಡೆದಿದ್ದು, 40 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿಚಾರಣೆ ಬಳಿಕ ಸಿದ್ದರಾಮಯ್ಯ ಕಾರಿನಲ್ಲಿ ವಾಪಾಸ್ಸಾಗಿದ್ದಾರೆ, ಮತ್ತೆ ವಿಚಾರಣೆಗೆ ಕರೆದರೆ ಬರಬೇಕು ಎಂದು ಅಧಿಕಾರಿಗಳು ಅವರಿಗೆ ಸೂಚನೆ ನೀಡಿಸಹಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ವಿಚಾರಣೆ ವೇಳೆ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಸಿಎಂ ಬಹಳ ತಾಳ್ಮೆಯಿಂದ ಉತ್ತರ ನೀಡಿದ್ದಾರೆ. ‘ನಾನು ಒಬ್ಬ ಕಾಮನ್ಮ್ಯಾನ್ ಅಂದುಕೊಂಡು ವಿಚಾರಣೆ ಮಾಡಿ. ಯಾವುದೇ ಒತ್ತಡಕ್ಕೂ ಒಳಗಾಗಬೇಡಿ’ ಎಂದು ಎರಡೆರಡು ಬಾರಿ ಅಧಿಕಾರಿಗಳಿಗೆ ಸಿಎಂ ತಿಳಿಸಿದ್ದರು ಎಂದು ವರದಿಯಾಗಿದೆ.
ಸಿಎಂ ನೀಡಿದ ಎಲ್ಲಾ ಉತ್ತರಗಳನ್ನು ಲಿಖಿತ ರೂಪದಲ್ಲಿ ದಾಖಲಿಸಲಾಗಿದ್ದು, ನಂತರ ಅದನ್ನು ಓದಿಕೊಂಡು ಸಿಎಂ ಸಹಿ ಹಾಕಿದರು. ಅರ್ಧ ಗಂಟೆ ವಿಚಾರಣೆ ಮುಗಿದಾಗ ಬ್ರೇಕ್ ಬೇಕಾ ಎಂದು ವಿಚಾರಣಾಧಿಕಾರಿಗಳು ಕೇಳಿದರು. ‘ಅದರ ಅಗತ್ಯವಿಲ್ಲ, ಮುಂದುವರಿಸಿ’ ಎಂದು ಸಿಎಂ ತಿಳಿಸಿದ್ದರು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.