ನವದೆಹಲಿ: ರೈಲುಗಳಲ್ಲಿ ವಿವಿಧ ತಿಂಡಿ ತಿನಿಸುಗಳ ಪೊಟ್ಟಣಗಳನ್ನು ಕಿಟಕಿಗಳಿಂದ ಹೊರಗೆಸೆಯುವ ಬದಲು ಕಸದ ಬುಟ್ಟಿಗಳಲ್ಲಿ ಹಾಕುವ ವ್ಯವಸ್ಥೆ ರೈಲ್ವೆ ಇಲಾಖೆಯಲ್ಲಿ ಜಾರಿಗೊಳಿಸಲಾಗಿದೆ. ದೇಶದ ಹಲವು ರೈಲುಗಳ ಸುಮಾರು 60,000 ಬೋಗಿಗಳಲ್ಲಿ ಕಸದ ಬುಟ್ಟಿಗಳನ್ನು ಇರಿಸಲಾಗುತ್ತಿದೆ.
ಶೌಚಾಲಯಗಳ ಸ್ವಚ್ಛತೆ, ಕಿಟಕಿಗಳಿಗೆ ಪರದೆ, ಬೋಗಿಗಳಲ್ಲಿ ಹತ್ತಲು ಅನುಕೂಲಕರ ಏಣಿ, ಕಸದ ಬುಟ್ಟಿ ಮತ್ತಿತರ ವ್ಯವಸ್ಥೆ ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ.
ಸದ್ಯ ಎಸಿ ಹಾಗೂ ಸ್ಲೀಪರ್ ಬೋಗಿಗಳಲ್ಲಿ ಕಸದ ಬುಟ್ಟಿಯ ವ್ಯವಸ್ಥೆ ಮಾಡಲಾಗಿದ್ದು ಎಲ್ಲಾ ಬೋಗಿಗಳಲ್ಲೂ ಇದನ್ನು ಅಳವಡಿಸಲಾಗುವುದು ಎಂದು ಹೇಳಿದೆ. ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಡಿಸೈನ್ ಹಾಗೂ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ಟೆಕ್ನಾಲಜಿ ಆಂತರಿಕ ವಿನ್ಯಾಸವನ್ನು ಸಿದ್ಧಪಡಿಸುತ್ತಿದೆ ಎಂದು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.