ಜಮುಯಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಬಿಹಾರದ ಜಮುಯಿಯಿಂದ 6,600 ಕೋಟಿ ರೂಪಾಯಿಗಳ ಬಹುವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.
ಅಲ್ಲದೇ ಈ ವೇಳೆ ಮೋದಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150 ನೇ ಜನ್ಮ ವಾರ್ಷಿಕೋತ್ಸವದ ವರ್ಷಾಚರಣೆಗೂ ಚಾಲನೆ ನೀಡಿದರು.
ಇಂದು ಪ್ರಾರಂಭಿಸಲಾದ ಯೋಜನೆಗಳು ಬುಡಕಟ್ಟು ಸಮುದಾಯಗಳನ್ನು ಉನ್ನತೀಕರಿಸುವ ಮತ್ತು ಪ್ರದೇಶದ ಗ್ರಾಮೀಣ ಮತ್ತು ದೂರದ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸುವ ಗುರಿಯನ್ನು ಹೊಂದಿವೆ.
ಭಗವಾನ್ ಬಿರ್ಸಾ ಮುಂಡಾ ಅವರ ಜೀವನ ಮತ್ತು ಶ್ರೀಮಂತ ಬುಡಕಟ್ಟು ಪರಂಪರೆ ಮತ್ತು ಸಂಸ್ಕೃತಿಯನ್ನು ಆಧರಿಸಿದ ಪ್ರದರ್ಶನವನ್ನು ಮೋದಿ ಉದ್ಘಾಟಿಸಿದರು.
ಬುಡಕಟ್ಟು ಸಮುದಾಯಗಳ ಶ್ರೀಮಂತ ಇತಿಹಾಸ ಮತ್ತು ಪರಂಪರೆಯನ್ನು ಸಂರಕ್ಷಿಸುವ ಉದ್ದೇಶದಿಂದ ಎರಡು ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ವಸ್ತುಸಂಗ್ರಹಾಲಯಗಳು ಮತ್ತು ಎರಡು ಬುಡಕಟ್ಟು ಸಂಶೋಧನಾ ಸಂಸ್ಥೆಗಳನ್ನು ಅವರು ಉದ್ಘಾಟಿಸಿದರು. ಜಮುಯಿಯಿಂದ ವರ್ಚುವಲ್ ಮೋಡ್ನಲ್ಲಿ PM-JANMAN ಅಭಿಯಾನದ ಅಡಿಯಲ್ಲಿ ನಿರ್ಮಿಸಲಾದ 11,000 ಮನೆಗಳ ಗೃಹ ಪ್ರವೇಶಕ್ಕೂ ಪ್ರಧಾನಮಂತ್ರಿ ಭಾಗವಹಿಸಿದ್ದರು.
ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಮುಖ್ಯಮಂತ್ರಿ ನಿತೀಶ್ ಕುಮಾರ್, ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಾಮ್, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಿರ್ಸಾ ಮುಂಡಾ, ಬುಧ್ರಾಮ್ ಮುಂಡಾ ಮತ್ತು ಹುತಾತ್ಮ ಯೋಧ ಸಿದ್ದೋ ಕನ್ಹು ಅವರ ಕುಟುಂಬದ ಸದಸ್ಯರಾದ ಮಂಡಲ್ ಮುರ್ಮು ಅವರನ್ನು ಪ್ರಧಾನಮಂತ್ರಿಯವರು ಸನ್ಮಾನಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.