ನವದೆಹಲಿ: ಕಳೆದ ವರ್ಷ ದೆಹಲಿಯಲ್ಲಿ ನಡೆದ ಶೃಂಗಸಭೆಯಲ್ಲಿ ಅಳವಡಿಸಿಕೊಂಡ ʼಒಂದು ಭೂಮಿ ಒಂದು ಕುಟುಂಬ ಒಂದು ಭವಿಷ್ಯʼ ಘೋಷವಾಕ್ಯವು ಜಿ20 ಬ್ರೆಜಿಲ್ ಶೃಂಗಸಭೆಯಲ್ಲೂ ಪ್ರಸ್ತುತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ “ಸಾಮಾಜಿಕ ಸೇರ್ಪಡೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ” ಕುರಿತು ಜಿ20 ಅಧಿವೇಶನದಲ್ಲಿ ಮಾತನಾಡಿದ ಮೋದಿ, ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ತೆಗೆದುಕೊಂಡ ಜನ-ಕೇಂದ್ರಿತ ನಿರ್ಧಾರಗಳನ್ನು ಬ್ರೆಜಿಲ್ನ ಅಧ್ಯಕ್ಷತೆ ಅವಧಿಯಲ್ಲಿ ಮುಂದಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಜಿ 20 ಎಸ್ಡಿಜಿ ಗುರಿಗಳಿಗೆ ಆದ್ಯತೆ ನೀಡಿದೆ ಮತ್ತು ಅಂತರ್ಗತ ಅಭಿವೃದ್ಧಿ, ಮಹಿಳಾ ನೇತೃತ್ವದ ಅಭಿವೃದ್ಧಿ ಮತ್ತು ಯುವ ಶಕ್ತಿಯ ಮೇಲೆ ಕೇಂದ್ರೀಕರಿಸಿದೆ ಎಂಬುದು ತೃಪ್ತಿಯ ವಿಷಯ ಎಂದರು.
“ಹಸಿವು ಮತ್ತು ಬಡತನದ ವಿರುದ್ಧ ಜಾಗತಿಕ ಒಕ್ಕೂಟ” ಗಾಗಿ ಬ್ರೆಜಿಲ್ನ ಉಪಕ್ರಮಕ್ಕೆ ಅವರು ಭಾರತದ ಬೆಂಬಲವನ್ನು ಪುನರುಚ್ಛರಿಸಿದರು.
ಜಾಗತಿಕ ಸಂಘರ್ಷಗಳಿಂದ ಉಂಟಾದ ಆಹಾರ, ಇಂಧನ ಮತ್ತು ರಸಗೊಬ್ಬರ ಬಿಕ್ಕಟ್ಟಿನಿಂದ ಜಾಗತಿಕ ದಕ್ಷಿಣದ ದೇಶಗಳು ಹೆಚ್ಚು ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕ ದಕ್ಷಿಣದ ಸವಾಲುಗಳು ಮತ್ತು ಆದ್ಯತೆಗಳನ್ನು ಮನಸ್ಸಿನಲ್ಲಿಟ್ಟುಕೊಂಡಾಗ ಮಾತ್ರ ಚರ್ಚೆಗಳು ಯಶಸ್ವಿಯಾಗುತ್ತವೆ ಎಂದು ಅವರು ತಿಳಿಸಿದರು.
ಜಾಗತಿಕ ಸಂಘರ್ಷದಿಂದ ಉಂಟಾಟ ಆಹಾರ, ಇಂಧನ ಮತ್ತು ರಸಗೊಬ್ಬರ ಬಿಕ್ಕಟ್ಟಿನಿಂದ ಜಾಗತಿಕ ದಕ್ಷಿಣ ದೇಶಗಳ ಮೇಲೆ ಹೆಚ್ಚು ಪ್ರತಿಕೂಲ ಪರಿಣಾಮ ಬೀರುತ್ತಿದೆ. ಆದ್ದರಿಂದ ನಾವು ಜಾಗತಿಕ ದಕ್ಷಿಣ ದೇಶಗಳ ಸವಾಲುಗಳು ಮತ್ತು ಆದ್ಯತೆಗಳನ್ನು ಮನಸ್ಸಿನಲ್ಲಿಟ್ಟುಕೊಂಡಾಗ ಮಾತ್ರ ನಮ್ಮ ಚರ್ಚೆಗಳು ಮತ್ತು ಪ್ರಯತ್ನಗಳು ಯಶಸ್ಸು ಕಾಣುತ್ತವೆ ಎಂದು ಮೋದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.