ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇದೇ ಮೊದಲ ಬಾರಿಗೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್ ಮಾಲೀಕತ್ವದ ಸ್ಪೇಸ್ಎಕ್ಸ್ ಕಂಪನಿಯ ರಾಕೆಟ್ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಿದೆ.
ಇಸ್ರೋದ ಜಿಸ್ಯಾಟ್ -20 ಸಂವಹನ ಉಪಗ್ರಹವನ್ನು ಹೊತ್ತುಕೊಂಡಿದ್ದ ಸ್ಪೇಸ್ಎಕ್ಸ್ನ ಫಾಲ್ಕನ್ 9 ರಾಕೆಟ್ ಭಾರತೀಯ ಕಾಲಮಾನ ಸೋಮವಾರ ರಾತ್ರಿ 23:45ಕ್ಕೆ ಅಮೆರಿಕದ ಫ್ಲೋರಿಡಾ ರಾಜ್ಯದ ಕೇಪ್ ಕೆನವೆರಲ್ ಉಡಾವಣಾ ಕೇಂದ್ರದಿಂದ ಉಡಾವಣೆಗೊಂಡಿತು. ಉಡಾವಣೆಗೊಂಡ 34 ನಿಮಿಷದಲ್ಲಿ ರಾಕೆಟ್ ಉಪಗ್ರಹವನ್ನು ಕಕ್ಷೆಗೆ ಯಶಸ್ವಿಯಾಗಿ ಸೇರಿಸಿದೆ.
ಜಿಸ್ಯಾಟ್-20 ಮಿಷನ್ ಅವಧಿ 14 ವರ್ಷ. ಅತ್ಯಂತ ಯಶಸ್ವಿಯಾಗಿ ಉಡಾವಣೆಯಾಗಿದೆ. ನಾವು ಉತ್ತಮ ಕಕ್ಷೆಯನ್ನು ಪಡೆದುಕೊಂಡಿದ್ದೇವೆ. ಉಪಗ್ರಹವು ಆರೋಗ್ಯಕರವಾಗಿದ್ದು ಸೌರ ಫಲಕಗಳನ್ನು ನಿಯೋಜಿಸಲಾಗಿದೆ ಎಂದು ಬೆಂಗಳೂರಿನ ಯುಆರ್ ರಾವ್ ಉಪಗ್ರಹ ಕೇಂದ್ರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಹೇಳಿದ್ದಾರೆ.
Liftoff of GSAT-N2! pic.twitter.com/4JqOrQINzE
— SpaceX (@SpaceX) November 18, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.