ತಿರುಪತಿ: ಹೊಸದಾಗಿ ರಚನೆಯಾದ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಮಂಡಳಿಯಲ್ಲಿ ಉದ್ಯೋಗದಲ್ಲಿರುವ ಹಿಂದೂಯೇತರರು ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕು ಅಥವಾ ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾವಣೆಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ನಿರ್ಣಯವನ್ನು ಸೋಮವಾರ ಅಂಗೀಕರಿಸಲಾಗಿದೆ.
ಟಿಟಿಡಿ ಸ್ವತಂತ್ರ ಸರ್ಕಾರಿ ಟ್ರಸ್ಟ್ ಆಗಿದ್ದು, ತಿರುಪತಿಯಲ್ಲಿರುವ ತಿರುಮಲ ವೆಂಕಟೇಶ್ವರ ದೇವಸ್ಥಾನವನ್ನು ನಿರ್ವಹಿಸುತ್ತದೆ. ಇದು ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯವಾಗಿದೆ. ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ಟಿಟಿಡಿಯಲ್ಲಿ ಹಿಂದೂಯೇತರರನ್ನು ನೇಮಕ ಮಾಡಿಕೊಂಡು ದೇಗುಲದ ಪಾವಿತ್ರತೆಗೆ ಧಕ್ಕೆ ತರುವ ಕೆಲಸಗಳನ್ನು ಮಾಡಲಾಗಿತ್ತು. ಇದೀಗ ಹೊಸದಾಗಿ ರಚನೆಯಾದ ಚಂದ್ರಬಾಬು ನಾಯ್ಡು ಸರ್ಕಾರ ಹಿಂದೂಯೇತರರನ್ನು ಟಿಟಿಡಿಯಿಂದ ಹೊರಗಟ್ಟಲು ಯೋಜನೆ ರೂಪಿಸಿದೆ.
ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು ಅವರು ನಿರ್ಧಾರವನ್ನು ದೃಢಪಡಿಸಿದ್ದಾರೆ, ಆದರೆ ಹಿಂದೂಯೇತರ ಉದ್ಯೋಗಿಗಳ ನಿಖರ ಸಂಖ್ಯೆಯನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಮಂಡಳಿಯ 7,000 ಖಾಯಂ ಉದ್ಯೋಗಿಗಳ ಪೈಕಿ ಸುಮಾರು 300 ಮಂದಿಯ ಮೇಲೆ ಈ ಕ್ರಮವು ಪರಿಣಾಮ ಬೀರಲಿದೆ ಎಂದು ಮೂಲಗಳು ತಿಳಿಸಿವೆ. ಟಿಟಿಡಿಯು ಸುಮಾರು 14,000 ಗುತ್ತಿಗೆ ಕಾರ್ಮಿಕರನ್ನು ಸಹ ನೇಮಿಸಿಕೊಂಡಿದೆ.
ಈ ನಿರ್ಧಾರವು ಆಂಧ್ರಪ್ರದೇಶದ ದತ್ತಿ ಕಾಯಿದೆ ಮತ್ತು ಟಿಟಿಡಿ ಕಾಯಿದೆಯೊಂದಿಗೆ ಹೊಂದಿಕೆಯಾಗುತ್ತದೆ , ಇದಕ್ಕೆ ವಿವಿಧ ನೌಕರರ ಸಂಘಗಳಿಂದ ಬೆಂಬಲವನ್ನು ಪಡೆದುಕೊಂಡಿದೆ. ಇ ಅಕ್ಟೋಬರ್ 31 ರಂದು ಟಿಟಿಡಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ, ನಾಯ್ಡು ಅವರು ದೇವಸ್ಥಾನವನ್ನು ಹಿಂದೂಗಳು ಮಾತ್ರ ನಡೆಸಬೇಕು ಎಂದು ತಮ್ಮ ನಿಲುವನ್ನು ಪುನರುಚ್ಛರಿಸುತ್ತಲೇ ಬಂದಿದ್ದಾರೆ.
ಹಲವು ವರ್ಷಗಳಿಂದ, ದೇವಸ್ಥಾನ ಮಂಡಳಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಬೇಕು ಎಂದು ಟಿಟಿಡಿ ಕಾಯ್ದೆಯನ್ನು ಮೂರು ಬಾರಿ ತಿದ್ದುಪಡಿ ಮಾಡಲಾಗಿದೆ. 1989 ರಲ್ಲಿ ಹೊರಡಿಸಲಾದ ಸರ್ಕಾರಿ ಆದೇಶವು ಟಿಟಿಡಿ-ಆಡಳಿತದ ಹುದ್ದೆಗಳಿಗೆ ನೇಮಕಾತಿಗಳನ್ನು ಹಿಂದೂಗಳಿಗೆ ಸೀಮಿತಗೊಳಿಸಬೇಕೆಂದು ಆದೇಶಿಸಿದೆ.
ಈ ನಿಬಂಧನೆಗಳ ಹೊರತಾಗಿಯೂ, ಹಿಂದೂಯೇತರರು ಸಂಘಟನೆಯೊಳಗೆ ಕೆಲಸ ಮಾಡುವುದನ್ನು ಮುಂದುವರೆಸಿದ್ದಾರೆ ಎಂದು ಮೂಲಗಳು ಹೇಳಿವೆ. ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಜೂನ್ನಲ್ಲಿ ಅಧಿಕಾರ ವಹಿಸಿಕೊಂಡ ನಂತರ, ಹಿಂದೂ ನೌಕರರು ತಮ್ಮ ಸಹೋದ್ಯೋಗಿಗಳ ಧರ್ಮದ ಬಗ್ಗೆ ದೂರುಗಳನ್ನು ನೀಡಲಾರಂಭಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.