ನವದೆಹಲಿ: ದೇಶವು ಇಂದು ಸಂವಿಧಾನ ದಿನವನ್ನು ಆಚರಿಸುತ್ತಿದೆ. ಭಾರತ ಸಂವಿಧಾನವನ್ನು ಅಂಗೀಕರಿಸಿದ 75 ನೇ ವರ್ಷದ ಸ್ಮರಣಾರ್ಥ ಇಂದಿನಿಂದ ಒಂದು ವರ್ಷದ ಆಚರಣೆಗಳನ್ನು ಸರ್ಕಾರ ಘೋಷಿಸಿದೆ. ಈ ವರ್ಷ ಸಂವಿಧಾನದ ಅಂಗೀಕಾರದ 75 ನೇ ವಾರ್ಷಿಕೋತ್ಸವವಾಗಿದ್ದು, ದೇಶದಾದ್ಯಂತ ವರ್ಷಪೂರ್ತಿ ಆಚರಣೆಗಳು ನವೆಂಬರ್ 26, 2025 ರವರೆಗೆ ಮುಂದುವರಿಯುತ್ತದೆ.
ನವೆಂಬರ್ 26, 1949 ರಂದು ಭಾರತದ ಸಂವಿಧಾನ ಸಭೆಯು ಸಂವಿಧಾನವನ್ನು ಅಂಗೀಕರಿಸಿತು ಅದು 1950ರ ಜನವರಿ 26 ರಂದು ಜಾರಿಗೆ ಬಂದಿತು.
ಸಂವಿಧಾನ ದಿನದ ಹಿನ್ನೆಲೆಯಲ್ಲಿ ಇಂದು ದೆಹಲಿಯ ಸಂವಿಧಾನ್ ಸದನ್ನ ಸೆಂಟ್ರಲ್ ಹಾಲ್ನಲ್ಲಿ ಭವ್ಯವಾದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ, ಕೇಂದ್ರ ಸಚಿವರು, ಸಂಸದರು, ದೆಹಲಿಯಲ್ಲಿರುವ ಮಿಷನ್ಗಳ ಮುಖ್ಯಸ್ಥರು ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಭಾರತ ಸಂವಿಧಾನವನ್ನು ಅಂಗೀಕರಿಸಿದ 75 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿ ಬಿಡುಗಡೆ ಮಾಡಲಾಗುತ್ತದೆ. “ಮೇಕಿಂಗ್ ಆಫ್ ದಿ ಕಾನ್ಸ್ಟಿಟ್ಯೂಷನ್ ಆಫ್ ಇಂಡಿಯಾ: ಎ ಗ್ಲಿಂಪ್ಸ್” ಮತ್ತು “ಮೇಕಿಂಗ್ ಆಫ್ ದಿ ಕಾನ್ಸ್ಟಿಟ್ಯೂಷನ್ ಆಫ್ ಇಂಡಿಯಾ ಅಂಡ್ ಇಟ್ಸ್ ಗ್ಲೋರಿಯಸ್ ಜರ್ನಿ” ಶೀರ್ಷಿಕೆಯ ಪುಸ್ತಕಗಳನ್ನು ಸಹ ಬಿಡುಗಡೆ ಮಾಡಲಾಗುತ್ತದೆ. ಸಂವಿಧಾನವನ್ನು ಸಂಸ್ಕೃತ ಮತ್ತು ಮೈಥಿಲಿಯಲ್ಲಿ ಬಿಡುಗಡೆ ಮಾಡಲಾಗುತ್ತದೆ. ಭಾರತದ ಸಂವಿಧಾನದ ಕಲೆಗೆ ಮೀಸಲಾದ ಕಿರುಪುಸ್ತಕವನ್ನು ಸಹ ಬಿಡುಗಡೆ ಮಾಡಲಾಗುತ್ತದೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು 19 ನವೆಂಬರ್ 2015 ರಂದು ಸರ್ಕಾರವು ಪ್ರತಿ ವರ್ಷ ನವೆಂಬರ್ 26 ಅನ್ನು ಸಂವಿಧಾನ ದಿನವನ್ನಾಗಿ ಆಚರಿಸುತ್ತದೆ ಎಂದು ಘೋಷಿಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.