ಢಾಕಾ: ಇಸ್ಕಾನ್ ಬಾಂಗ್ಲಾದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾದ ಚಿನ್ಮೋಯ್ ಕೃಷ್ಣ ದಾಸ್ ಅವರ ಬಂಧನದ ಬಗ್ಗೆ ಬಾಂಗ್ಲಾದೇಶದ ಸರ್ಕಾರದೊಂದಿಗೆ ಮಾತನಾಡಲು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ಮಂಗಳವಾರ ಭಾರತವನ್ನು ಒತ್ತಾಯಿಸಿದೆ. ಬಾಂಗ್ಲಾದ ಆರೋಪಗಳನ್ನು ಆಧಾರರಹಿತ ಎಂದು ಕರೆದಿರುವ ಇಸ್ಕಾನ್, ಢಾಕಾ ಪೊಲೀಸರು ಮಾಡಿದ ಬಂಧನವನ್ನು ಖಂಡಿಸಿದೆ ಮತ್ತು ಭಯೋತ್ಪಾದನೆಗೆ ಮತ್ತ ಇಸ್ಕಾನ್ಗೆ ಎಲ್ಲಿಯೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.
ಹಿಂದೂ ಹಕ್ಕುಗಳ ರಕ್ಷಣೆಗಾಗಿ ನಡೆದ ಪ್ರತಿಭಟನೆಯ ನೇತೃತ್ವವನ್ನು ವಹಿಸಿದ ಕಾರಣಕ್ಕೆ ಚಿನ್ಮೋಯ್ ಅವರನ್ನು ಬಂಧಿಸಲಾಗಿದೆ.
X ಪೋಸ್ಟ್ ಮಾಡಿರುವ ISKCON, “ಇಸ್ಕಾನ್ ಬಾಂಗ್ಲಾದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾದ ಶ್ರೀ ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ಢಾಕಾ ಪೊಲೀಸರು ಬಂಧಿಸಿದ್ದಾರೆ ಎಂಬ ಗೊಂದಲದ ವರದಿಗಳನ್ನು ನಾವು ನೋಡಿದ್ದೇವೆ. ಇಸ್ಕಾನ್ ಬಗ್ಗೆ ಆಧಾರರಹಿತ ಆರೋಪಗಳನ್ನು ಮಾಡುವುದು ಅತಿರೇಕದ ಸಂಗತಿಯಾಗಿದೆ. ಭಯೋತ್ಪಾದನೆಗೂ ಇಸ್ಕಾನ್ಗೂ ಯಾವುದೇ ರೀತಿಯ ಸಂಬಂಧವಿಲ್ಲ. ಭಾರತ ಸರ್ಕಾರ ಬಾಂಗ್ಲಾದೇಶ ಸರ್ಕಾರದೊಂದಿಗೆ ಮಾತನಾಡಬೇಕು ನಾವು ಶಾಂತಿಪ್ರಿಯ ಭಕ್ತಿ ಚಳವಳಿ ಎಂದು ಅವರಿಗೆ ಮನವರಿಕೆ ಮಾಡಿಕೊಡಬೇಕು, ಈ ಭಕ್ತರ ರಕ್ಷಣೆಗಾಗಿ ಶ್ರೀ ಕೃಷ್ಣನಿಗೆ ನಮ್ಮ ಪ್ರಾರ್ಥನೆಗಳನ್ನು ಸಲ್ಲಿಸುತ್ತೇವೆ” ಎಂದಿದೆ.
ಬಾಂಗ್ಲಾದೇಶದಲ್ಲಿ ಹಿಂದೂ ಜನರನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರದ ಬಿಜೆಪಿ ನಾಯಕ ದಿಲೀಪ್ ಘೋಷ್ ಆರೋಪಿಸಿದ್ದಾರೆ.
ಶ್ರೀರಾಮ ಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಢಾಕಾ ಪೊಲೀಸರ ಕೃತ್ಯವನ್ನು ಖಂಡಿಸಿದ್ದಾರೆ. “ಇದು ಸಂಪೂರ್ಣವಾಗಿ ತಪ್ಪು. ಪಾಕಿಸ್ತಾನವು ಹಿಂದೂಗಳನ್ನು ಹೇಗೆ ನಡೆಸಿಕೊಂಡಿದೆಯೋ ಹಾಗೆಯೇ ಬಾಂಗ್ಲಾದೇಶವೂ ಹಿಂದೂಗಳನ್ನು ನಡೆಸಿಕೊಳ್ಳುತ್ತಿದೆ ಎಂದು ನಾನು ನಂಬುತ್ತೇನೆ. ಹಿಂದೂಗಳ ಪರ ನಿಲುವು ತಳೆಯುವವರನ್ನು ಈ ರೀತಿ ಬಂಧಿಸಲಾಗಿದೆ, ಇದು ತಪ್ಪು, ನಮ್ಮ ಸರ್ಕಾರವು ಇದರಲ್ಲಿ ಮಧ್ಯಪ್ರವೇಶಿಸಬೇಕು. ಸರ್ಕಾರ ಮಧ್ಯಪ್ರವೇಶ ಮಾಡದಿದ್ದರೆ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿಯುತ್ತದೆ” ಎಂದಿದ್ದಾರೆ.
ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಎಂದೂ ಕರೆಯಲ್ಪಡುವ ಚಂದನ್ ಕುಮಾರ್ ಧಾರ್ ಅವರನ್ನು ಢಾಕಾ ವಿಮಾನ ನಿಲ್ದಾಣದಿಂದ ಸೋಮವಾರ ಮಧ್ಯಾಹ್ನ ಬಂಧಿಸಲಾಗಿದೆ ಎಂದು ಡೈಲಿ ಸ್ಟಾರ್ ವರದಿ ಮಾಡಿದೆ. ಚಟ್ಟೋಗ್ರಾಮ್ನಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಢಾಕಾದ ಹಜರತ್ ಶಹಜಲಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿ ಪೊಲೀಸ್ ತಂಡವು ಈ ಬಂಧನವನ್ನು ಮಾಡಿದೆ.
In several districts, Hindus are coming out in the streets against the arrest of Sri Chinmay Krishna Das Prabhu.
This video is from the #Barishal district.
Hindu youths gathered and are protesting in Town Hall Chawk. #FreeChinmayKrishnaPrabhu pic.twitter.com/KiVAEQqlbk
— Hindu Voice (@HinduVoice_in) November 25, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.