ನವದೆಹಲಿ: ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಸೇರಿದಂತೆ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದ ಅಧಿಕಾರಿಗಳನ್ನು ಭಾರತ ಒತ್ತಾಯಿಸಿದೆ.
ಬಾಂಗ್ಲಾದೇಶ ಸಮ್ಮಿಲಿತ್ ಸನಾತನ ಜಾಗರಣ ಸಂಘಟನೆಯ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರ ಬಂಧನ ಮತ್ತು ಜಾಮೀನು ನಿರಾಕರಣೆಯನ್ನು ತೀವ್ರ ಕಳವಳದಿಂದ ಗಮನಿಸಿರುವುದಾಗಿ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಈ ಘಟನೆಯು ಬಾಂಗ್ಲಾದೇಶದಲ್ಲಿ ಉಗ್ರಗಾಮಿ ಶಕ್ತಿಗಳಿಂದ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ಅನೇಕ ದಾಳಿಗಳಿಗೆ ಹೊಸ ಸೇರ್ಪಡೆ ಎಂದು ಅದು ಹೇಳಿದೆ.
ಅಲ್ಪಸಂಖ್ಯಾತರ ಮನೆಗಳು ಮತ್ತು ವ್ಯಾಪಾರ ಸಂಸ್ಥೆಗಳಿಗೆ ಬೆಂಕಿ ಹಚ್ಚುವುದು ಮತ್ತು ಲೂಟಿ ಮಾಡುವುದು, ಕಳ್ಳತನ ಮತ್ತು ವಿಧ್ವಂಸಕತೆ ಮತ್ತು ದೇವತೆಗಳು ಮತ್ತು ದೇವಾಲಯಗಳ ಅಪವಿತ್ರೀಕರಣದ ಹಲವಾರು ಪ್ರಕರಣಗಳು ಬಾಂಗ್ಲಾದಲ್ಲಿ ನಡೆಯುತ್ತಲೇ ಇದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಈ ಘಟನೆಗಳ ದುಷ್ಕರ್ಮಿಗಳು ತಲೆಮರೆಸಿಕೊಂಡಿದ್ದರೂ, ಶಾಂತಿಯುತ ಸಭೆಗಳ ಮೂಲಕ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಪ್ರಸ್ತುತಪಡಿಸುವ ಧಾರ್ಮಿಕ ಮುಖಂಡರ ವಿರುದ್ಧ ಆರೋಪ ಹೊರಿಸಲಾಗಿದ್ದು ದುರದೃಷ್ಟಕರ ಎಂದು ಸಚಿವಾಲಯ ಹೇಳಿದೆ. ದಾಸ್ ಅವರ ಬಂಧನದ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಅಲ್ಪಸಂಖ್ಯಾತರ ಮೇಲಿನ ದಾಳಿಗಳ ಬಗ್ಗೆಯೂ ಕಳವಳ ವ್ಯಕತ್ಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.