ನವದೆಹಲಿ: ಈ ವರ್ಷ ದೇಶದ ವಿಮಾನಗಳು, ವಿಮಾನ ನಿಲ್ದಾಣಗಳಿಗೆ ಸುಮಾರು 1,000 ಹುಸಿ ಬಾಂಬ್ ಬೆದರಿಕೆ ಸಂದೇಶಗಳು ಮತ್ತು ಕರೆಗಳನ್ನು ಬಂದಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಎಂಟು ಪಟ್ಟು ಹೆಚ್ಚು ಎಂದು ಕೇಂದ್ರ ಸರ್ಕಾರ ಹೇಳಿದೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್, 2023 ರ ಕ್ಯಾಲೆಂಡರ್ ವರ್ಷದಲ್ಲಿ ಒಟ್ಟು 122 ಹುಸಿ ಬಾಂಬ್ ಬೆದರಿಕೆಗಳು ಬಂದಿವೆ ಎಂದು ಅವರು ಹೇಳಿದರು. ಅಲ್ಲದೇ ಒಟ್ಟು 250 ಕ್ಕೂ ಹೆಚ್ಚು ಎಫ್ಐಆರ್ಗಳು ಮತ್ತು 12 ಬಂಧನಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.
ಇತ್ತೀಚಿನ ಬೆದರಿಕೆ ಕರೆಗಳ ಹಾವಳಿ ವಿಪರೀತವಾಗಿ ಹೆಚ್ಚಾಗುತ್ತಿದೆ. ಆದರೆ ದೇಶದ ಯಾವುದೇ ವಿಮಾನ ನಿಲ್ದಾಣಗಳು ಅಥವಾ ವಿಮಾನಗಳಲ್ಲಿ ಯಾವುದೇ ನಿಜವಾದ ಬೆದರಿಕೆ ಪತ್ತೆಯಾಗಿಲ್ಲ ಎಂದು ಸಚಿವರು ಹೇಳಿದರು. ಬೆದರಿಕೆ ಕರೆ ಮಾಡುವವರನ್ನು ನೋ ಫ್ಲೈ ಲಿಸ್ಟ್ಗೆ ಸೇರಿಸಲು ಏರ್ಕ್ರಾಫ್ಟ್ (ಭದ್ರತೆ) ನಿಯಮಗಳು, 2023 ಅನ್ನು ತಿದ್ದುಪಡಿ ಮಾಡಲು ಸರ್ಕಾರ ಪರಿಗಣಿಸುತ್ತಿದೆ ಎಂದು ಮೊಹೋಲ್ ಮಾಹಿತಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.