
ಪ್ರಯಾಗರಾಜ್: ಮುಂಬರುವ ಮಹಾ ಕುಂಭಮೇಳಕ್ಕೆ ಮುಂಚಿತವಾಗಿ, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಪ್ರಯಾಗರಾಜ್ನಲ್ಲಿರುವ ಮಹಾಕುಂಭ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಘೋಷಿಸಿದೆ.
ಜನವರಿ 2025 ಕ್ಕೆ ನಿಗದಿಪಡಿಸಲಾದ ಭವ್ಯ ಧಾರ್ಮಿಕ ಕಾರ್ಯಕ್ರಮ ಮಹಾ ಕುಂಭಮೇಳದ ನಿರ್ವಹಣೆ ಮತ್ತು ಆಡಳಿತವನ್ನು ಸುಗಮಗೊಳಿಸಲು, ಸುಗಮ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಪ್ರತ್ಯೇಕ ಜಿಲ್ಲೆಯನ್ನು ಘೋಷಿಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಹೊಸದಾಗಿ ರಚನೆಯಾಗುವ ಜಿಲ್ಲೆಯನ್ನು ಮಹಾ ಕುಂಭಮೇಳ ಎಂದು ಕರೆಯಲಾಗುತ್ತದೆ. ಇದು 67 ಗ್ರಾಮಗಳನ್ನು ಒಳಗೊಂಡಿದೆ.
ಇನ್ನೊಂದೆಡೆ ಮಹಾಕುಂಭ 2025 ರ ಸಿದ್ಧತೆಗಳನ್ನು ಪರಿಶೀಲಿಸಲು, ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಮಾಡಲು ಪ್ರಧಾನಿ ಮೋದಿ ಡಿಸೆಂಬರ್ 13 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.
ಮಹಾಕುಂಭಮೇಳ ಜನವರಿ 13ರಿಂದ ಫೆಬ್ರವರಿ 26ರವರೆಗೆ ನಡೆಯಲಿದೆ. 12 ವರ್ಷಗಳಿಗೊಮ್ಮೆ ನಡೆಯುವ ಈ ಕಾರ್ಯಕ್ರಮವು ಭಾರತೀಯ ಸಂಸ್ಕೃತಿಯ ಪ್ರಚಾರದಲ್ಲಿ ಒಂದು ಮೈಲಿಗಲ್ಲು ಎಂದು ನಿರೀಕ್ಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


