ಹೈದರಾಬಾದ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ PROBA-3 ಮಿಷನ್ ಅನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದೆ. ಈ ಮಿಷನ್ ಇಸ್ರೋ ಮತ್ತು ಯುರೋಪಿಯನ್ ಸ್ಪೇಸ್ ಏಜೆನ್ಸಿ (ESA) ನಡುವಿನ ಸಹಯೋಗದ ಪ್ರಯತ್ನವಾಗಿದೆ.
ಇದು ವಿಶಿಷ್ಟ ಬಾಹ್ಯಾಕಾಶ ಯೋಜನೆಯಾಗಿದ್ದು, ಎರಡು ಉಪಗ್ರಹಗಳು ಪರಸ್ಪರ ಅತ್ಯಂತ ಸನಿಹದಲ್ಲಿ ಬಾಹ್ಯಾಕಾಶದಲ್ಲಿ ಸಂಚರಿಸುತ್ತಾ, ಭೂಮಿಯ ಮೇಲೆ ಕೃತಕ ಸೂರ್ಯ ಗ್ರಹಣವನ್ನು ಸೃಷ್ಟಿಸಲಿವೆ.
ಈ ಕಾರ್ಯಾಚರಣೆಯಲ್ಲಿ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್ಎಲ್ವಿ)-ಸಿ59 ಸುಮಾರು 550 ಕೆಜಿ ತೂಕದ ಉಪಗ್ರಹಗಳನ್ನು ಹೆಚ್ಚು ಅಂಡಾಕಾರದ ಕಕ್ಷೆಗೆ ಹೊತ್ತೊಯ್ದಿದೆ.
ಯುರೋಪಿಯನ್ ಸ್ಪೇಸ್ ಏಜೆನ್ಸಿ (ಇಎಸ್ಎ) ನೇತೃತ್ವದ ಪ್ರೋಬಾ-3 ಯೋಜನೆ ಬಾಹ್ಯಾಕಾಶ ಯೋಜನೆಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತ್ಯಂತ ನಿಖರವಾದ ಸಂರಚನಾ ಹಾರಾಟ (ಫಾರ್ಮೇಶನ್ ಫ್ಲೈಯಿಂಗ್) ನಡೆಸಲು ಪ್ರಯತ್ನಿಸಲಿದೆ. ಎರಡು ಬಾಹ್ಯಾಕಾಶ ನೌಕೆಗಳು ಈ ಯೋಜನೆಯ ಭಾಗವಾಗಿದ್ದು, ಅವುಗಳು ಬಾಹ್ಯಾಕಾಶದ ಕಕ್ಷೆಯಲ್ಲಿ ತಾವಿರುವ ಸ್ಥಾನ ಒಂದು ಮಿಲಿಮೀಟರ್ ಜಾಗದಲ್ಲಿ ನಿಖರವಾಗಿ ಭೂಮಿಯ ಸುತ್ತ ಪರಿಭ್ರಮಣೆ ನಡೆಸುತ್ತವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.