ನವದೆಹಲಿ: ಪಶ್ಚಿಮ ಏಷ್ಯಾ ರಾಷ್ಟ್ರ ಸಿರಿಯಾದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಅಧಿಸೂಚನೆಯ ತನಕ ಸಿರಿಯಾಕ್ಕೆ ಎಲ್ಲಾ ರೀತಿಯ ಪ್ರಯಾಣವನ್ನು ತಪ್ಪಿಸುವಂತೆ ಭಾರತೀಯ ಪ್ರಜೆಗಳಿಗೆ ಸೂಚಿಸಲಾಗಿದೆ.
ಸಲಹೆಯೊಂದರಲ್ಲಿ, ವಿದೇಶಾಂಗ ಸಚಿವಾಲಯವು ಪ್ರಸ್ತುತ ಸಿರಿಯಾದಲ್ಲಿರುವ ಭಾರತೀಯರಿಗೆ ಜಾಗರೂಕರಾಗಿರಲು ಮತ್ತು ಅಪ್ಡೇಟ್ಗಳಿಗಾಗಿ ಡಮಾಸ್ಕಸ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರುವಂತೆ ಕೇಳಿಕೊಂಡಿದೆ.
ರಾಯಭಾರ ಕಚೇರಿಯ ತುರ್ತು ಸಹಾಯವಾಣಿ ಸಂಖ್ಯೆ +963 993385973 ಮತ್ತು ಇಮೇಲ್ ಐಡಿ hoc.damascus@mea.gov.in ಆಗಿದೆ.
ಸರಿಯಾದಿಂದ ಭಾರತಕ್ಕೆ ಹೊರಡಲು ಬಯಸುವವರಿಗೆ ವಾಣಿಜ್ಯ ವಿಮಾನಗಳ ಮೂಲಕ ಹೊರಡಲು ಸಲಹೆ ನೀಡಲಾಗಿದೆ. ಇತರರು ತಮ್ಮ ಸುರಕ್ಷತೆಯ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಮತ್ತು ಸಂಚಾರವನ್ನು ನಿರ್ಬಂಧಿಸಬೇಕು ಎಂದು ವಿನಂತಿಸಿದೆ.
ಸಿರಿಯಾದಲ್ಲಿ ಸರ್ಕಾರ ಮತ್ತು ಬಂಡುಕೋರರ ನಡುವೆ ಘರ್ಷಣೆ ನಡೆಯುತ್ತಿದ್ದು, ಈಗಾಗಲೇ ಹಲವು ಪ್ರದೇಶಗಳು ಸರ್ಕಾರದ ನಿಯಂತ್ರಣವನ್ನು ಕಳೆದುಕೊಂಡಿದೆ ಎಂದು ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.