
ಮುಂಬಯಿ: ಮಹಾ ವಿಕಾಸ್ ಅಘಾಡಿ (MVA)ಯಿಂದ ಸಮಾಜವಾದಿ ಪಕ್ಷ ಹೊರಬಂದಿದ್ದು, ಇದು ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳಿಗೆ ದೊಡ್ಡ ಹೊಡೆತವನ್ನು ನೀಡಿದೆ. ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಅವರ ಆಪ್ತರಿಂದ ವಿವಾದಾತ್ಮಕ ಹೇಳಿಕೆಯ ನಂತರ ಸಮಾಜವಾದಿ ಪಕ್ಷವು ಮೈತ್ರಿಯನ್ನು ತೊರೆಯಲು ನಿರ್ಧರಿಸಿದೆ.
ಬಾಬರಿ ಮಸೀದಿ ಧ್ವಂಸದ 32 ನೇ ವಾರ್ಷಿಕೋತ್ಸವದಂದು, ಶಿವಸೇನೆಯ (ಯುಬಿಟಿ) ನಾಯಕ ಮಿಲಿಂದ್ ನಾರ್ವೇಕರ್ ಅವರು ಮಸೀದಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಜೊತೆಗೆ ಶಿವಸೇನೆಯ ನಾಯಕ ಬಾಳಾಸಾಹೇಬ್ ಠಾಕ್ರೆ ಅವರ “ಇದನ್ನು ಮಾಡಿದವರ ಬಗ್ಗೆ ನನಗೆ ಹೆಮ್ಮೆ ಇದೆ” ಎಂಬ ವಾಕ್ಯ ಬರೆದಿದಿದ್ದಾರೆ.
ಎಂ ನಾರ್ವೇಕರ್ ಅವರ ಪೋಸ್ಟ್ನಲ್ಲಿ ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಚಿತ್ರಗಳು ಸಹ ಕಾಣಿಸಿಕೊಂಡಿವೆ.
ಈ ಪೋಸ್ಟ್ ಸಮಾಜವಾದಿಯ ಅಸಮಾಧಾನಕ್ಕೆ ಕಾರಣವಾಗಿದ್ದು, ಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಿದೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸಮಾಜವಾದಿ ಪಕ್ಷವು ಇಬ್ಬರು ಶಾಸಕರನ್ನು ಹೊಂದಿದೆ. ಎಂವಿಎ ಪಕ್ಷಗಳು ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಬಹಿಷ್ಕರಿಸಿದ್ದರು. ಆದರೆ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಅಬು ಅಸಿಮ್ ಅಜ್ಮಿ ಮತ್ತು ಪಕ್ಷದ ನಾಯಕ ರೈಸ್ ಶೇಖ್ ಅವರು ಬಹಿಷ್ಕಾರದ ಕರೆಯನ್ನು ಧಿಕ್ಕರಿಸಿ ಪ್ರಮಾಣ ವಚನ ಸ್ವೀಕರಿಸಿದರು.
— Milind Narvekar (@NarvekarMilind_) December 5, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


