ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ, ಸಿಂಗ್ ಭಾರತ ಮತ್ತು ರಷ್ಯಾ ನಡುವಿನ ಸ್ನೇಹವನ್ನು ಪ್ರಸ್ತಾಪಿಸಿದರು, ಭಾರತ ಸದಾ ತನ್ನ ಸ್ನೇಹಿತ ರಷ್ಯಾದ ಪರವಾಗಿ ನಿಂತಿದೆ ಮತ್ತು ಭವಿಷ್ಯದಲ್ಲಿ ಅದನ್ನು ಮುಂದುವರಿಸುತ್ತದೆ ಎಂದು ಹೇಳಿದರು. ಉಭಯ ನಾಯಕರು ದ್ವಿಪಕ್ಷೀಯ ರಕ್ಷಣಾ ಸಹಕಾರದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಎರಡು ರಾಷ್ಟ್ರಗಳ ನಡುವಿನ ಪಾಲುದಾರಿಕೆಯು ಅಪಾರ ಸಾಮರ್ಥ್ಯವನ್ನು ಹೊಂದಿದೆ ಮತ್ತು ಸಂಯೋಜಿತ ಪ್ರಯತ್ನಗಳು ಗಮನಾರ್ಹ ಫಲಿತಾಂಶಗಳಿಗೆ ದಾರಿ ಮಾಡಿಕೊಡುತ್ತವೆ ಎಂದು ರಾಜನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು.
ಇದಕ್ಕೂ ಮೊದಲು, ರಕ್ಷಣಾ ಸಚಿವರು ಮಾಸ್ಕೋದಲ್ಲಿ ರಷ್ಯಾದ ರಕ್ಷಣಾ ಸಚಿವ ಆಂಡ್ರೆ ಬೆಲೌಸೊವ್ ಅವರೊಂದಿಗೆ ಮಿಲಿಟರಿ ಮತ್ತು ಮಿಲಿಟರಿ ತಾಂತ್ರಿಕ ಸಹಕಾರ ಕುರಿತ ಭಾರತ-ರಷ್ಯಾ ಅಂತರ-ಸರ್ಕಾರಿ ಆಯೋಗದ 21 ನೇ ಸಭೆಯ ಸಹ-ಅಧ್ಯಕ್ಷತೆ ವಹಿಸಿದ್ದರು. ಆರಂಭಿಕ ಭಾಷಣ ಮಾಡಿದ ರಾಜನಾಥ್, ಭಾರತ-ರಷ್ಯಾ ಸಂಬಂಧವು ತುಂಬಾ ಪ್ರಬಲವಾಗಿದೆ ಮತ್ತು ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆಯ ಜವಾಬ್ದಾರಿಗಳನ್ನು ನಿರ್ವಹಿಸಿದೆ ಎಂದು ಒತ್ತಿ ಹೇಳಿದರು.
Glad to call on the Russian President Mr Vladimir Putin at Kremlin in Moscow. https://t.co/lDgg7AOG23 pic.twitter.com/iJWkM9Khmn
— Rajnath Singh (@rajnathsingh) December 10, 2024
Had a very productive IRIGC-M&MTC meeting with my Russian counterpart Andrey Belousov in Moscow. Reviewing the full range of bilateral defence ties, we discussed ways to deepen cooperation between both the countries. We are committed to further strengthen India-Russia Special and… pic.twitter.com/vmFcWXE4YJ
— Rajnath Singh (@rajnathsingh) December 10, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.