ನವದೆಹಲಿ: ಮೂರು ದಿನಗಳ ಭಾರತ ಪ್ರವಾಸಕ್ಕಾಗಿ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ಡಿಸ್ಸಾನಾಯಕೆ ಭಾನುವಾರ ಸಂಜೆ ನವದೆಹಲಿಗೆ ಆಗಮಿಸಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಅವರನ್ನು ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ ಎಲ್ ಮುರುಗನ್ ಬರಮಾಡಿಕೊಂಡರು. ಶ್ರೀಲಂಕಾದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಅಧ್ಯಕ್ಷೀಯ ಮತ್ತು ಸಂಸತ್ತಿನ ಚುನಾವಣೆಯ ನಂತರ ಅಧ್ಯಕ್ಷ ಡಿಸ್ಸಾನಾಯಕೆ ಭಾರತಕ್ಕೆ ಇದು ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ.
ತಮ್ಮ ಭೇಟಿಯ ಸಮಯದಲ್ಲಿ, ಡಿಸಾನಾಯಕೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ ಮತ್ತು ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ವಿಷಯಗಳ ಕುರಿತು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಹೂಡಿಕೆ ಮತ್ತು ವಾಣಿಜ್ಯ ಸಂಪರ್ಕವನ್ನು ಉತ್ತೇಜಿಸಲು ದೆಹಲಿಯಲ್ಲಿ ನಡೆಯುವ ವ್ಯಾಪಾರ ಸಮಾರಂಭದಲ್ಲಿ ಅಧ್ಯಕ್ಷ ಡಿಸಾನಾಯಕೆ ಭಾಗವಹಿಸಲಿದ್ದಾರೆ. ಬಿಹಾರದ ಬೋಧಗಯಾಗೆ ಭೇಟಿ ನೀಡಲಿದ್ದಾರೆ. ಅಧ್ಯಕ್ಷ ದಿಸ್ಸಾನಾಯಕೆ ಅವರ ಭಾರತ ಭೇಟಿಯು ಉಭಯ ದೇಶಗಳ ನಡುವಿನ ಬಹುಮುಖಿ ಮತ್ತು ಪರಸ್ಪರ ಪ್ರಯೋಜನಕಾರಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಶ್ರೀಲಂಕಾ ಹಿಂದೂ ಮಹಾಸಾಗರದ ಪ್ರದೇಶದಲ್ಲಿ ಭಾರತದ ಹತ್ತಿರದ ಕಡಲ ನೆರೆಯ ರಾಷ್ಟ್ರವಾಗಿದೆ ಮತ್ತು ಭಾರತದ ನೆರೆಹೊರೆ ಮೊದಲ ನೀತಿಯಲ್ಲಿ ಕೇಂದ್ರ ಸ್ಥಾನವನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.