ಬೆಂಗಳೂರು: ಖ್ಯಾತ ಪರಿಸರವಾದಿ ಹಾಗೂ ಪದ್ಮ ಪ್ರಶಸ್ತಿ ಪುರಸ್ಕೃತರಾದ ಕರ್ನಾಟಕದ ವೃಕ್ಷಮಾತೆ ತುಳಸಿ ಗೌಡ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.
ತುಳಸಿ ಗೌಡ ಅವರು ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ಪರಿಸರವನ್ನು ಸಂರಕ್ಷಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಹೇಳಿದ್ದಾರೆ. ಅವರ ಕೆಲಸವು ನಮ್ಮ ಭೂಮಿಯನ್ನು ರಕ್ಷಿಸಲು ಪೀಳಿಗೆಗೆ ಸ್ಫೂರ್ತಿ ಮತ್ತು ಮಾರ್ಗದರ್ಶಿ ಬೆಳಕಾಗಿ ಉಳಿಯುತ್ತದೆ ಎಂದು ಅವರು ಹೇಳಿದರು.
ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು.
ತುಳಸಿಗೌಡ ಅವರ ಮನೆಯಲ್ಲಿ ತೀರಾ ಬಡತನವಿದ್ದರೂ ಹಸಿರು ಕ್ರಾಂತಿ ಮಾಡಿ ಇಡೀ ದೇಶದ ಗಮನ ಸೆಳೆದಿದ್ದರು. ತುಳಸಿಗೌಡ ಅವರ ಪರಿಸರ ಪ್ರೇಮವನ್ನ ಮೆಚ್ಚಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ .2020ರಲ್ಲಿ ಅಂದಿನ ರಾಷ್ಟ್ರಪತಿ ರಮಾನಾಥ ಕೋವಿಂದ ಅವರಿಂದ ತುಳಸಿಗೌಡ ಅವರು ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು.
ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ.… pic.twitter.com/b5cECGYw4f
— Narendra Modi (@narendramodi) December 17, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.