ನವದೆಹಲಿ: ಉತ್ತರಾಖಂಡದ ರೀತಿ ಪ್ರತಿಯೊಂದು ರಾಜ್ಯದಲ್ಲೂ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸಂವಿಧಾನದ 75 ವರ್ಷಗಳ ಅಂಗೀಕಾರದ ಕುರಿತು ರಾಜ್ಯಸಭೆಯಲ್ಲಿ ಚರ್ಚೆಯನ್ನು ಮುಕ್ತಾಯಗೊಳಿಸಿದ ಶಾ, ಯುಸಿಸಿಯನ್ನು ದೇಶಾದ್ಯಂತ ಜಾರಿಗೊಳಿಸಲು ವಿಫಲವಾದ ಕಾಂಗ್ರೆಸ್ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಗೃಹ ಸಚಿವರು, ಜಾತ್ಯತೀತ ರಾಷ್ಟ್ರದಲ್ಲಿ ಪ್ರತಿಯೊಂದು ಧರ್ಮಕ್ಕೂ ಸಮಾನ ಕಾನೂನು ಏಕೆ ಇರಬಾರದು ಎಂಬುದನ್ನು ಪಕ್ಷ ಸ್ಪಷ್ಟಪಡಿಸಬೇಕು ಎಂದು ಕೇಳಿದರು.
ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ಗಳ (ಇವಿಎಂ) ಕುರಿತಾದ ಕಾಂಗ್ರೆಸ್ನ ಆರೋಪಗಳ ಬಗ್ಗೆಯೂ ಶಾ ವಾಗ್ದಾಳಿ ನಡೆಸಿದರು, ಮಹಾರಾಷ್ಟ್ರದಲ್ಲಿ ಫಲಿತಾಂಶಗಳ ಬಗ್ಗೆ ದೂರು ನೀಡಿದ ಕೆಲವರು ಜಾರ್ಖಂಡ್ನಲ್ಲಿನ ಜಯವನ್ನು ಆಚರಿಸಿದರು ಎಂದು ಟಾಂಗ್ ನೀಡಿದರು.
ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವೇ ಎಂಬುದನ್ನು ಪರಿಶೀಲಿಸುವಂತೆ ಭಾರತೀಯ ಚುನಾವಣಾ ಆಯೋಗವು ಜನರನ್ನು ಕೇಳಿದೆ, ಆದರೆ ಯಾರೂ ಅದಕ್ಕೆ ಮುಂದಾಗಲಿಲ್ಲ. ಇವಿಎಂಗಳ ಮೇಲಿನ ಅರ್ಜಿಗಳನ್ನು ಸುಪ್ರೀಂ ಕೋರ್ಟ್ 24 ಬಾರಿ ತಿರಸ್ಕರಿಸಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.
ಸಂವಿಧಾನದ 75 ವರ್ಷಗಳ ಕುರಿತ ಚರ್ಚೆ ಸೋಮವಾರ ರಾಜ್ಯಸಭೆಯಲ್ಲಿ ಆರಂಭವಾಗಿ ಎರಡು ದಿನಗಳ ಕಾಲ ನಡೆಯಿತು. ಕಳೆದ ವಾರ ಲೋಕಸಭೆಯಲ್ಲಿ ಚರ್ಚೆ ನಡೆದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.