ನವದೆಹಲಿ: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ಸಾಲದ ಒಂದು ಭಾಗವನ್ನು ಪಡೆಯಲು ವಿಜಯ್ ಮಲ್ಯಗೆ ಸೇರಿದ್ದ ರೂ 14,131 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸಂಸತ್ತಿಗೆ ತಿಳಿಸಿದರು.
ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ವಾಂಟೆಡ್ ವ್ಯಕ್ತಿಗಳ ಸಾಲವನ್ನು ಮರುಪಾವತಿಸಲು ಜಾರಿ ನಿರ್ದೇಶನಾಲಯವು ಒಟ್ಟು ರೂ 22,280 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದೆ ಮತ್ತು ಆರ್ಥಿಕ ಅಪರಾಧಿಗಳ ವಿರುದ್ಧದ ಹೋರಾಟವನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಸೀತಾರಾಮನ್ ಲೋಕಸಭೆಗೆ ತಿಳಿಸಿದರು.
ಮರಳಿ ಪಡೆದ ಮೊತ್ತವು ವಿಜಯ್ ಮಲ್ಯನ ರೂ 1,052 ಕೋಟಿ ಮತ್ತು ಚೋಕ್ಸಿಯವರ ರೂ 2,565 ಕೋಟಿಗಳನ್ನು ಒಳಗೊಂಡಿದೆ. ನ್ಯಾಷನಲ್ ಸ್ಪಾಟ್ ಎಕ್ಸ್ಚೇಂಜ್ ಲಿಮಿಟೆಡ್ ಅಥವಾ ಎನ್ಎಸ್ಇಎಲ್ನಲ್ಲಿನ ರೂ 17.5 ಕೋಟಿ ಮೊತ್ತವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.
“ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ರೂ 22,280 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಯಶಸ್ವಿಯಾಗಿ ಮರಳಿ ಪಡೆದಿದೆ. ನಾವು ಯಾರನ್ನೂ ಬಿಟ್ಟಿಲ್ಲ. ಅವರು ದೇಶ ಬಿಟ್ಟು ಓಡಿ ಹೋದರೂ ನಾವು ಅವರ ಹಿಂದೆ ಹೋಗಿದ್ದೇವೆ. ಬ್ಯಾಂಕ್ಗಳಿಗೆ ಹಿಂತಿರುಗಬೇಕಾದ ಹಣ ಹಿಂದಿರುಗುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.