ನವದೆಹಲಿ: “ಕಾಂಗ್ರೆಸ್ ಪಕ್ಷವು ನನ್ನ ಹೇಳಿಕೆಗಳನ್ನು ತಿರುಚಿದ್ದು ಖಂಡನೀಯ, ಕಾಂಗ್ರೆಸ್ ಯಾವಾಗಲೂ ಸಂವಿಧಾನವನ್ನು ಅಗೌರವಿಸುತ್ತದೆ ಮತ್ತು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ವಿರೋಧಿಸುತ್ತದೆ. ಕಾಂಗ್ರೆಸ್ ಬಾಬಾಸಾಹೇಬ್ ಮತ್ತು ಸಂವಿಧಾನದ ವಿರೋಧಿ ಪಕ್ಷವಾಗಿದೆ. ಕಾಂಗ್ರೆಸ್ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಮಂಗಳವಾರ ತಾವು ಮಾಡಿದ ಭಾಷಣದಲ್ಲಿ ಅಂಬೇಡ್ಕರ್ ಅವರನ್ನು ಅವಮಾನಿಸಲಾಗಿದೆ ಎಂದು ಕಾಂಗ್ರೆಸ್ ಮಾಡುತ್ತಿರುವ ಆರೋಪಗಳನ್ನು ಖಂಡಿಸಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಗೌರವಿಸಲಿಲ್ಲ, ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಂಬೇಡ್ಕರ್ ಅವರನ್ನು ಗೌರವಿಸಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ತನ್ನ ಹೇಳಿಕೆಯನ್ನು ತಿರುಚಿ ಪ್ರತಿಭಟನೆ ನಡೆಸಿದೆ ಎಂದು ಹೇಳಿದರು. ನಾನು ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಎಂದಿಗೂ ಅವಮಾನಿಸದ ಪಕ್ಷದಿಂದ ಬಂದಿದ್ದೇನೆ ಎಂದು ಹೇಳಿದರು. ಬಿಜೆಪಿ ಯಾವಾಗಲೂ ಅಂಬೇಡ್ಕರ್ ಅವರ ತತ್ವಗಳನ್ನು ಅನುಸರಿಸುತ್ತಿದೆ ಎಂದರು.
ತಾನು ರಾಜ್ಯಸಭೆಯಲ್ಲಿ ಮಾಡಿದ ಸಂಪೂರ್ಣ ಹೇಳಿಕೆಯನ್ನು ಜನರ ಮುಂದಿಡುವಂತೆ ಮಾಧ್ಯಮಗಳಿಗೆ ಒತ್ತಾಯಿಸಿದರು. ಸಂಪೂರ್ಣ ಹೇಳಿಕೆ ಜನರ ಮುಂದೆ ಬಂದಾಗ ಎಲ್ಲವೂ ಸ್ಪಷ್ಟವಾಗುತ್ತದೆ ಎಂದು ಹೇಳಿದರು.
#WATCH | Delhi: Union Home Minister Amit Shah says, "…My statement was presented in a distorted manner. Earlier they made PM Narendra Modi's edited statements public. When the elections were going on, my statement was edited using AI. And today they are presenting my statement… pic.twitter.com/Br3AGEARqQ
— ANI (@ANI) December 18, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.