ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದಡಿ ವಿರೋಧ ಪಕ್ಷಗಳ ನಾಯಕರಿಗೆ ಸುರಕ್ಷತೆ ಇಲ್ಲದಂತಾಗಿದೆ. ವಿಧಾನಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಕೆಟ್ಟ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪದಡಿ ಬಿಜೆಪಿ ನಾಯಕ ಸಿಟಿ ರವಿ ಅವರನ್ನು ಬಂಧನಕ್ಕೆ ಒಳಪಡಿಸಲಾಗಿದೆ. ಆರೋಪ ಸತ್ಯವೋ ಸುಳ್ಳೋ ಎಂದು ಸಾಬೀತಾಗುವ ಮುನ್ನವೇ ಅವರನ್ನು ಪೊಲೀಸರು ಬಂದು ಬಂಧಿಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನೊಂದೆಡೆ ಪೊಲೀಸ್ ಕಸ್ಟಡಿಯಲ್ಲೇ ಸಿ.ಟಿ ರವಿ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ತಲೆಗೆ ಗಾಯಗಳಾಗಿವೆ. ಈ ಕೃತ್ಯ ಕಾಂಗ್ರೆಸ್ನ ಗೂಂಡಾಗಿರಿಯನ್ನು ತೋರಿಸುತ್ತದೆ ಎಂದು ಬಿಜೆಪಿ ಆರೋಪಿಸಿದೆ.
ಈ ಬಗ್ಗೆ ಸರಣಿ ಎಕ್ಸ್ ಪೋಸ್ಟ್ ಮಾಡಿರುವ ಸಿ.ಟಿ ರವಿ “ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು 3 ಗಂಟೆ ತೆಗೆದುಕೊಂಡ ಕರ್ನಾಟಕ ಪೊಲೀಸರು. ಈಗ ಕಳೆದ ಐದಾರು ಗಂಟೆಗಳಿಂದ ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಸುತ್ತಾಡಿಸುತಿದ್ದಾರೆ. ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್ ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ ತೊಂದರೆಗೆ ಪೊಲೀಸ್ ಇಲಾಖೆ ಹಾಗೂ ಕಾಂಗ್ರೆಸ್ ಸರ್ಕಾರವೇ ಕಾರಣ” ಎಂದು ಹೇಳಿದ್ದಾರೆ.
ವಿಧಾನ ಪರಿಷತ್ತಿನ ಕಲಾಪ ಅನಿರ್ಧಿಷ್ಠಾವಧಿಗೆ ಮುಂದೂಡಿದ ಬಳಿಕ ಕಾಂಗ್ರೇಸ್ ಸರ್ಕಾರದ “ಗೌರವಾನ್ವಿತ ಮಂತ್ರಿಗಳು”, ಕಾಂಗ್ರೆಸ್ಸಿನ ಶಾಸಕರು ನಡೆಸಿದ ದಾಂಧಲೆಗೆ ವಿಡಿಯೋ – ಆಡಿಯೋ ಸಾಕ್ಷಿ ಇದೆ. ಸರ್ಕಾರದ ಸಚಿವರು ಸುವರ್ಣ ಸೌಧದಲ್ಲಿ ನಡೆಸಿದ ಗೂಂಡಾ ವರ್ತನೆಗೆ ಸಾಕ್ಷ್ಯಾಧಾರವಿದೆ ಅವರ ಮೇಲೆ ಏನು ಕ್ರಮ ಕೈಗೊಳ್ಳುತ್ತಿರಿ ಸನ್ಮಾನ್ಯ “ನ್ಯಾಯನೀತಿಪರ” ಮುಖ್ಯಮಂತ್ರಿಗಳೇ? ಎಂದು ಪ್ರಶ್ನೆ ಮಾಡಿದ್ದಾರೆ.
ಘಟನೆಯನ್ನು ಖಂಡಿಸಿರುವ ಬಿಜೆಪಿ, “ತುಘಲಕ್ ಆಡಳಿತದಲ್ಲಿ ಜನಸಾಮಾನ್ಯರಿಗೆ ರಕ್ಷಣೆ ಇಲ್ಲ, ಶಾಸಕರಿಗೆ ವಿಧಾನಸೌಧದಲ್ಲೂ ರಕ್ಷಣೆ ಇಲ್ಲದಂತಾಗಿದೆ. ಸಚಿವರು ಮತ್ತು ಅವರ ಬೆಂಬಲಿಗರು ವಿಧಾನ ಸೌಧದೊಳಗೆ ನುಗ್ಗಿ ಶಾಸಕರೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ರಾಜ್ಯದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಿದೆ. ಆರೋಪ ಬಂದಾಗ ಕಾನೂನಾತ್ಮಕವಾಗಿ ನಡೆದುಕೊಳ್ಳಬೇಕೇ ವಿನಹಃ ಉಗ್ರರ ಹಾಗೆ, ಭಯೋತ್ಪಾದಕರ ರೀತಿಯಲ್ಲಿ ವಿಧಾನಸೌಧದೊಳಗೆ ನುಗ್ಗಿ ಹಿಂಸಾತ್ಮಕ ಪ್ರತಿಕ್ರಿಯೆ ನೀಡಿರುವುದು ಅಕ್ಷಮ್ಯ ಅಪರಾಧ. ವಿಧಾನ ಸಭೆ, ವಿಧಾನ ಪರಿಷತ್ತಿನಲ್ಲಿ ಪ್ರತಿಯೊಂದು ಚರ್ಚೆಗಳ ಆಡಿಯೋ ಹಾಗೂ ವಿಡಿಯೋ ದಾಖಲಾತಿ ಇರುತ್ತದೆ. ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಹೇಳಿಕೆಯನ್ನು ತಿರುಚಿ ಗೊಂದಲ ಎಬ್ಬಿಸಿದಂತೆ ರಾಜ್ಯದಲ್ಲೂ ಸರಣಿ ಭ್ರಷ್ಟಾಚಾರ, ಹಗರಣ ಮತ್ತು ಬಾಣಂತಿಯರ ಸಾವಿನ ಪ್ರಕರಣಗಳ ದಿಕ್ಕು ತಪ್ಪಿಸಲು ಸಿದ್ದರಾಮಯ್ಯ ಸರ್ಕಾರ ಸುಳ್ಳು ಮೊಕದ್ದಮೆ ಹಾಕಿದೆ” ಎಂದಿದೆ.
ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ ತೆಗೆದುಕೊಂಡ ಕರ್ನಾಟಕ ಪೊಲೀಸರು. ಈಗ ಕಳೆದ ಐದಾರು ಗಂಟೆಗಳಿಂದ ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಸುತ್ತಾಡಿಸುತಿದ್ದಾರೆ.
ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್ ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ… pic.twitter.com/kNDzbmL2Rr
— C T Ravi 🇮🇳 ಸಿ ಟಿ ರವಿ (@CTRavi_BJP) December 19, 2024
ವಿಧಾನ ಪರಿಷತ್ತಿನ ಕಲಾಪ ಅನಿರ್ಧಿಷ್ಠಾವಧಿಗೆ ಮುಂದೂಡಿದ ಬಳಿಕ ಕಾಂಗ್ರೇಸ್ ಸರ್ಕಾರದ "ಗೌರವಾನ್ವಿತ ಮಂತ್ರಿಗಳು", ಕಾಂಗ್ರೆಸ್ಸಿನ ಶಾಸಕರು ನಡೆಸಿದ ದಾಂಧಲೆಗೆ ವಿಡಿಯೋ – ಆಡಿಯೋ ಸಾಕ್ಷಿ ಇದೆ. ಸರ್ಕಾರದ ಸಚಿವರು ಸುವರ್ಣ ಸೌಧದಲ್ಲಿ ನಡೆಸಿದ ಗೂಂಡಾ ವರ್ತನೆಗೆ ಸಾಕ್ಷ್ಯಾಧಾರವಿದೆ ಅವರ ಮೇಲೆ ಏನು ಕ್ರಮ ಕೈಗೊಳ್ಳುತ್ತಿರಿ ಸನ್ಮಾನ್ಯ… pic.twitter.com/EMfpWgYx2L
— C T Ravi 🇮🇳 ಸಿ ಟಿ ರವಿ (@CTRavi_BJP) December 19, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.