ನವದೆಹಲಿ: ಬಾಂಗ್ಲಾದೇಶದ ಹಂಗಾಮಿ ಸರಕಾರದ ಪ್ರಮುಖ ಸಹಾಯಕರೊಬ್ಬರು ಭಾರತೀಯ ಭೂಪ್ರದೇಶದ ಕೆಲವು ಪ್ರದೇಶಗಳನ್ನು ಬಾಂಗ್ಲಾದೇಶದ ಭಾಗ ಎಂದು ಹೇಳುವ ಮ್ಯಾಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಭಾರತವು ಢಾಕಾದಲ್ಲಿ ತೀವ್ರ ಪ್ರತಿಭಟನೆಯನ್ನು ದಾಖಲಿಸಿದೆ.
ಪ್ರಚೋದನಕಾರಿ ಕಾಮೆಂಟ್ಗಳಿಗೆ ಹೆಸರಾದ ಬಾಂಗ್ಲಾ ಸರ್ಕಾರದ ಸಹಾಯಕ ಮಹ್ಫುಜ್ ಆಲಂ ಅವರು ನಾಲ್ಕು ದಿನಗಳ ಹಿಂದೆ ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಅಸ್ಸಾಂನ ಕೆಲವು ಭಾಗಗಳನ್ನು ಬಾಂಗ್ಲಾದೇಶದ ಭಾಗಗಳಾಗಿ ತೋರಿಸುವ ನಕ್ಷೆಯನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದರು. ಇದು ಭಾರೀ ವಿವಾದವನ್ನು ಸೃಷ್ಟಿಸುತ್ತಿದ್ದಂತೆ ಅವರು ಪೋಸ್ಟ್ ಅನ್ನು ಅಳಿಸಿ ಹಾಕಿದ್ದಾರೆ.
ಆಲಂ ಅವರು ಬಾಂಗ್ಲಾದೇಶದ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದಲ್ಲಿ ಹಂಗಾಮಿ ಸಚಿವರಾಗಿದ್ದಾರೆ.
ಪೋಸ್ಟ್ಗೆ ಬಲವಾಗಿ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, “ನಾವು ಈ ಬಗ್ಗೆ ಬಾಂಗ್ಲಾದೇಶ ಸರ್ಕಾರದೊಂದಿಗೆ ವಿಷಯ ಪ್ರಸ್ತಾಪಿಸಿದ್ದೇವೆ. ಈ ವಿಷಯದ ಬಗ್ಗೆ ನಾವು ಪ್ರತಿಭಟನೆಯನ್ನು ಬಲವಾಗಿ ದಾಖಲಿಸಿದ್ದೇವೆ. ಉಲ್ಲೇಖಿಸಲಾದ ಪೋಸ್ಟ್ ಅನ್ನು ತೆಗೆದುಹಾಕಲಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.