ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಪ್ರತಿಪಕ್ಷಗಳು ನಿಯಮಿತವಾಗಿ ಅವಮಾನಿಸುತ್ತಿವೆ ಎಂದು ಆರೋಪಿಸಿ ಬಿಜೆಪಿ ಇಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.
ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಕ್ಷದ ಹಿರಿಯ ನಾಯಕ ರವಿಶಂಕರ್ ಪ್ರಸಾದ್, 1952ರ ಲೋಕಸಭೆ ಚುನಾವಣೆಯಲ್ಲಿ ಮತ್ತು ನಂತರ 1954ರಲ್ಲಿ ನಡೆದ ಉಪಚುನಾವಣೆಯಲ್ಲಿ ಡಾ.ಅಂಬೇಡ್ಕರ್ ಅವರ ಸೋಲನ್ನು ಕಾಂಗ್ರೆಸ್ ಖಚಿತಪಡಿಸಿತ್ತು ಎಂದು ಆರೋಪಿಸಿದರು.
ಸರ್ಕಾರ ಮತ್ತು ಅದರ ಆಳ್ವಿಕೆಯಲ್ಲಿ ಭಾರತ ರತ್ನವನ್ನು ಅಂಬೇಡ್ಕರ್ ಅವರಿಗೆ ನೀಡಲಿಲ್ಲ. ಅಂಬೇಡ್ಕರ್ ಅವರ ಹೆಸರಿನಲ್ಲಿ ಕಾಂಗ್ರೆಸ್ ಯಾವುದೇ ಸ್ಮಾರಕಗಳನ್ನು ನಿರ್ಮಿಸಿಲ್ಲ ಎಂದು ಅವರು ಹೇಳಿದರು. ಭಾರತೀಯ ಸಂವಿಧಾನ ಶಿಲ್ಪಿಗೆ ಗೌರವ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಬೂಟಾಟಿಕೆ ಮಾಡಿದೆ ಎಂದು ಆರೋಪಿಸಿದ್ದಾರೆ. ಬಾಬಾ ಸಾಹೇಬರನ್ನು ಅವಮಾನಿಸಿದ್ದಕ್ಕಾಗಿ ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಅವರು ಒತ್ತಾಯಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.