ಪ್ರಯಾಗರಾಜ್: ಮುಂಬರುವ ಮಹಾಕುಂಭ 2025 ಕ್ಕೆ ದೇಶ ಮತ್ತು ಪ್ರಪಂಚದಾದ್ಯಂತ ಬರುವ ಎಲ್ಲಾ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಸುಗಮ ಸಾರಿಗೆ, ಉತ್ತಮ ವಸತಿ ಸೌಕರ್ಯಗಳು ಮತ್ತು ತ್ವರಿತ ನೆರವು ಖಾತರಿಪಡಿಸುವ ಸರ್ಕಾರದ ಬದ್ಧತೆಯನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುನರುಚ್ಚರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕೃತ ಪ್ರಕಟಣೆಯ ಪ್ರಕಾರ, ಮುಖ್ಯಮಂತ್ರಿಗಳು ಸೋಮವಾರ ಪ್ರಯಾಗ್ರಾಜ್ಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು, ಮೇಳ ನಡೆಯುವ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಟೆಂಟ್ ಸಿಟಿಯನ್ನು ವೀಕ್ಷಿಸಿದರು. ಚಳಿಯ ವಾತಾವರಣವನ್ನು ಪರಿಗಣಿಸಿ ಸಮಯಕ್ಕೆ ಸರಿಯಾಗಿ ಆಹಾರ ಮತ್ತು ಇತರ ವಸ್ತುಗಳ ವ್ಯವಸ್ಥೆಯನ್ನು ಮಾಡುವ ಮಹತ್ವವನ್ನು ಅವರು ಒತ್ತಿ ಹೇಳಿದರು.
ಸಂಗಮ ದಂಡೆಯ ಮೇಲಿರುವ ಆರೈಲ್ನಲ್ಲಿ ಸ್ಥಾಪಿಸಲಾಗುತ್ತಿರುವ ಸಂಪೂರ್ಣ ಸುಸಜ್ಜಿತ ಟೆಂಟ್ ಸಿಟಿಯಲ್ಲಿ 6,000 ಕ್ಕೂ ಹೆಚ್ಚು ಜನರಿಗೆ ವಸತಿ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಅಧಿಕಾರಿಗಳು ಈ ವೇಳೆ ಮಾಹಿತಿ ನೀಡಿದರು.
ಇಡೀ ಶಿಬಿರವನ್ನು ಆಕರ್ಷಕವಾಗಿ ಅಲಂಕರಿಸಲಾಗುತ್ತಿದೆ. ಮಹಾಕುಂಭದ ವೇಳೆ ಟೆಂಟ್ ಸಿಟಿಯಲ್ಲಿ ತಂಗುವ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಉತ್ಸಾಹವಿದೆ ಎಂದು ಹೇಳಿದ ಸಿಎಂ, ಅನುಭವವು ಆಹ್ಲಾದಕರವಾಗಿರುತ್ತದೆ ಎಂದು ಭರವಸೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.