ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, NHAI, ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಪ್ರಾಣಿ-ಸಂಬಂಧಿತ ಅಪಘಾತಗಳನ್ನು ತಪ್ಪಿಸಲು ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಜಾನುವಾರು ಆಶ್ರಯವನ್ನು ಒದಗಿಸುವ ಪ್ರಾಯೋಗಿಕ ಯೋಜನೆಯನ್ನು ಕೈಗೊಂಡಿದೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಂಡುಬರುವ ಬಿಡಾಡಿ ದನಗಳು ಮತ್ತು ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆಯನ್ನು ಖಾತ್ರಿಪಡಿಸುವ ಜೊತೆಗೆ ಪ್ರಯಾಣಿಕರಿಗೆ ಸುರಕ್ಷಿತ ಪ್ರಯಾಣದ ಅನುಭವವನ್ನು ಸೃಷ್ಟಿಸುವ ಉದ್ದೇಶವನ್ನು ಈ ಉಪಕ್ರಮವು ಹೊಂದಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಾಯೋಗಿಕ ಯೋಜನೆಯಡಿಯಲ್ಲಿ 0.21 ರಿಂದ 2.29 ಹೆಕ್ಟೇರ್ಗಳವರೆಗೆ ಆಶ್ರಯ ಪ್ರದೇಶಗಳು ಇರಲಿದೆ. ಈ ಆಶ್ರಯಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ದನಗಳ ಉಪಸ್ಥಿತಿಯನ್ನು ಕಡಿಮೆ ಮಾಡಲಿದೆ, ಆ ಮೂಲಕ ಬಿಡಾಡಿ ದನಗಳಿಗೆ ಸುರಕ್ಷಿತ ಸ್ಥಳಗಳಾಗಿ ಕಾರ್ಯನಿರ್ವಹಿಸಲಿವೆ. ಪ್ರಾಯೋಗಿಕ ಉಪಕ್ರಮವು ಯುಪಿ ಮತ್ತು ಹರಿಯಾಣದ ಗಡಿಯಿಂದ NH-334B ನ ರೋಹ್ನಾ ವಿಭಾಗವನ್ನು ಒಳಗೊಂಡಂತೆ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಾರ್ಯಗತಗೊಳ್ಳುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.