ನವದೆಹಲಿ: ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ ಇಂದು ಬೆಳಗ್ಗೆ ಆರಂಭಗೊಂಡಿದೆ. ಸುಮಾರು 75 ದೇಶಗಳ 6,000 ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಒಡಿಶಾ ಸರ್ಕಾರವು ಪ್ರತಿನಿಧಿಗಳಿಗೆ ರಾಜ್ಯದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರದರ್ಶಿಸಲು ಹಲವು ಪ್ರಯತ್ನಗಳನ್ನು ಮಾಡಿದೆ.
ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಸಹಭಾಗಿತ್ವದಲ್ಲಿ ಒಡಿಶಾ ಸರ್ಕಾರವು ಜಂಟಿಯಾಗಿ ಆಯೋಜಿಸಿದ್ದ ಯುವ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದೊಂದಿಗೆ ಸಮಾವೇಶವು ಇಂದು ಪ್ರಾರಂಭವಾಯಿತು. ಕೇಂದ್ರ ಸಚಿವರಾದ ಡಾ ಎಸ್ ಜೈಶಂಕರ್, ಪಬಿತ್ರಾ ಮಾರ್ಗರಿಟಾ, ಡಾ ಮನ್ಸೂಖ್ ಮಾಂಡವಿಯಾ, ರಕ್ಷಾ ನಿಖಿಲ್ ಖಡ್ಸೆ ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಇಂದು ಯುವ ಪ್ರವಾಸಿ ಭಾರತೀಯ ದಿವಸ್ನಲ್ಲಿ ಭಾಗಿಯಾದರು. ಜಾಗತಿಕ ಭಾರತೀಯ ಸಮುದಾಯದೊಂದಿಗೆ ಭಾರತದ ಸಂಬಂಧವನ್ನು ಆಚರಿಸುವಲ್ಲಿ ಈ ಸಮಾವೇಶವು ಮಹತ್ವದ ಸಂದರ್ಭವಾಗಿದೆ.
ಈ ಕಾರ್ಯಕ್ರಮವನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಔಪಚಾರಿಕವಾಗಿ ಉದ್ಘಾಟಿಸಲಿದ್ದಾರೆ. ಇದು ಭಾರತದ ಅಭಿವೃದ್ಧಿ ಮತ್ತು ಅದರ ಜಾಗತಿಕ ಸ್ಥಾನಮಾನವನ್ನು ರೂಪಿಸುವಲ್ಲಿಸಾಗರೋತ್ತರ ಭಾರತೀಯರ ಕೊಡುಗೆಗಳನ್ನು ಎತ್ತಿ ತೋರಿಸುವ ವ್ಯಾಪಕ ಶ್ರೇಣಿಯ ಚಟುವಟಿಕೆಗಳನ್ನು ಒಳಗೊಂಡಿರುತ್ತದೆ. ಟ್ರಿನಿಡಾಡ್ ಮತ್ತು ಟೊಬಾಗೋದ ಅಧ್ಯಕ್ಷೆ ಕ್ರಿಸ್ಟಿನ್ ಕಾರ್ಲಾ ಕಂಗಲೂ ಅವರು ಸಮ್ಮೇಳನದ ಈ ಆವೃತ್ತಿಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
‘ವಿಕಸಿತ ಭಾರತಕ್ಕೆ ಸಾಗರೋತ್ತರ ಭಾರತೀಯರ ಕೊಡುಗೆ’ ಎಂಬ ವಿಷಯದ ಮೇಲೆ ಈ ಸಮಾವೇಶ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಗಳನ್ನು ಗುರುತಿಸಲು ಭಾರತೀಯ ಸಗರೋತ್ತರ ಸದಸ್ಯರಿಗೆ ರಾಷ್ಟ್ರಪತಿಗಳು ಪ್ರವಾಸಿ ಭಾರತೀಯ ಸಮ್ಮಾನ್ ಅನ್ನು ಪ್ರದಾನ ಮಾಡುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.