ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ, ಮಕರ ಸಂಕ್ರಮಣದ ಪವಿತ್ರ ದಿನವಾದ ಮಂಗಳವಾರ ಮೂರು ಕೋಟಿ 50 ಲಕ್ಷಕ್ಕೂ ಹೆಚ್ಚು ಭಕ್ತರು ಮತ್ತು ಯಾತ್ರಿಕರು ಪವಿತ್ರ ಸ್ನಾನ ಮಾಡಿದ್ದಾರೆ.
ತ್ರಿವೇಣಿ ಸಂಗಮದಲ್ಲಿ ಮಕರ ಸಂಕ್ರಾಂತಿಯ ಸಮಯದಲ್ಲಿ ಜರುಗಿದ ಅಮೃತ ಸ್ನಾನದ ಸಮಯದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ಮಹಾ ಕುಂಭದಲ್ಲಿ ಲಕ್ಷಾಂತರ ಭಕ್ತರು ಮತ್ತು ಸಂತರು ಅಮೃತ ಸ್ನಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ವಿವಿಧ ಅಖಾಡಗಳ ಮಹಾಮಂಡಲೇಶ್ವರರು ಅಮೃತ ಸ್ನಾನ ಮಾಡಿದರು.
ವಿಧಿವಿಧಾನಗಳು ಸುಸೂತ್ರವಾಗಿ ನಡೆಯುತ್ತಿವೆ.ಪವಿತ್ರ ಸ್ನಾನದ ನಂತರ, ಭಕ್ತರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು ಮತ್ತು ಘಾಟ್ಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸಂಪ್ರದಾಯವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಅವರು ದಾನದಲ್ಲಿ ತೊಡಗಿದರು. ಈ ಮೂಲಕ ಹಬ್ಬದ ಪಾವಿತ್ರ್ಯತೆಯನ್ನು ಗಾಢವಾಗಿಸಿದರು.
ಇಂದು ಬೆಳಗ್ಗೆ ಕೂಡ ಗಂಗಾ ಆರತಿಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಹೆಲಿಕಾಪ್ಟರ್ಗಳ ಮೂಲಕ ಭಕ್ತರು ಮತ್ತು ಯಾತ್ರಾರ್ಥಿಗಳ ಮೇಲೆ ಹೂವಿನ ದಳಗಳನ್ನು ಸುರಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.