ನವದೆಹಲಿ: ಭಾರತ ಮತ್ತು ಸಿಂಗಾಪುರ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60 ನೇ ವರ್ಷವನ್ನು ಆಚರಿಸುತ್ತಿವೆ.
ಭಾರತ ಮತ್ತು ಸಿಂಗಾಪುರ ಬುಧವಾರ ಸೆಮಿಕಂಡಕ್ಟರ್ಗಳು, ಕೈಗಾರಿಕಾ ಪಾರ್ಕ್ಗಳು, ಕೌಶಲ್ಯ, ಡಿಜಿಟಲೀಕರಣ ಮತ್ತು ವ್ಯಾಪಾರ ಅಭಿವೃದ್ಧಿಯಲ್ಲಿ ಸಹಕಾರದ ಕುರಿತು ಚರ್ಚಿಸಿದವು.ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ಸಿಂಗಾಪುರದ ಪ್ರವಾಸಿ ಅಧ್ಯಕ್ಷ ಥರ್ಮನ್ ಷಣ್ಮುಗರತ್ನಂ ಅವರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸಿದರು.
ಉಭಯ ದೇಶಗಳು 60 ವರ್ಷಗಳ ದ್ವಿಪಕ್ಷೀಯ ಸಂಬಂಧವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ, ಸಿಂಗಾಪುರದ ಅಧ್ಯಕ್ಷರ ಭೇಟಿಯು ಭಾರತ-ಸಿಂಗಾಪೂರ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಗೆ ಹೊಸ ವೇಗವನ್ನು ನೀಡುತ್ತದೆ ಎಂಬ ವಿಶ್ವಾಸವಿದೆ ಎಂದು ಜೈಶಂಕರ್ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಹೇಳಿದ್ದಾರೆ.
ಸಿಂಗಾಪುರ ಅಧ್ಯಕ್ಷ ಥರ್ಮನ್ ಷನ್ಮುಗನಾಥಂ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಇಂದು ಚರ್ಚೆ ನಡೆಸಲಿದ್ದಾರೆ. ಮುರ್ಮು ಔತಣಕೂಟವನ್ನೂ ಆಯೋಜಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಸಿಂಗಾಪುರದ ಅಧ್ಯಕ್ಷರು ಭೇಟಿಯಾಗಲಿದ್ದಾರೆ.
ಷಣ್ಮುಗರತ್ನಂ ಅವರು ಐದು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ಸಚಿವರು, ಸಂಸದರು, ಅಧಿಕಾರಿಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗ ಅವರ ಜತೆಗಿದೆ. ಸಿಂಗಾಪುರದ ಅಧ್ಯಕ್ಷರಾಗಿ ಇದು ಅವರ ಮೊದಲ ಭಾರತ ಭೇಟಿಯಾಗಿದೆ. ಅಧ್ಯಕ್ಷ ಥರ್ಮನ್ ಶುಕ್ರವಾರ ಮತ್ತು ಶನಿವಾರ ಒಡಿಶಾಗೆ ಭೇಟಿ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.