ಬೈಂದೂರು: ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ನಡೆದ ಡಿ ದೇವರಾಜ ಅರಸು ಅಭಿವೃದ್ಧಿ ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಡಿ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಹಾಕಿರುವ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿ ಹೊಳೆ, ವಿವಿಧ ಸಮುದಾಯಗಳ ಅಭಿವೃದ್ಧಿ ಗಾಗಿ ಇರುವ ನಿಗಮಗಳಲ್ಲಿ ಅನುಷ್ಠಾನ ಗೊಳ್ಳುವ ಸಾಲ ಸೌಲಭ್ಯ ಯೋಜನೆ ಗಳು ಅರ್ಹತೆ ಇದ್ದ ಎಲ್ಲರಿಗೂ ತಲುಪಲು ವಿಫಲವಾಗಿದೆ. ಪ್ರತಿಯೊಂದು ಯೋಜನೆಯಡಿ ನೂರಾರು ಅರ್ಜಿಗಳು ಆನ್ ಲೈನ್ ನಲ್ಲಿ ದಾಖಲಾಗಿದ್ದರೂ ಕೇವಲ 01 ಅಥವಾ 02 ಬೆರಳೆಣಿಕೆಯ ಗುರಿಯನ್ನು ನಿಗದಿ ಪಡಿಸುತ್ತಿರುವ ಕಾರಣ ಕನಿಷ್ಠ ಪಕ್ಷ ಉತ್ತಮ ಸಂಖ್ಯೆಯ ಫಲನುಭವಿಗಳನ್ನು ಆಯ್ಕೆ ಮಾಡಲು ಸಮಿತಿಗೆ ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೂರಾರು ಅರ್ಜಿಗಳಿಗೆ ಒಂದಂಕಿಯ ಗುರಿ ನಿಗದಿ ಪಡಿಸುವುದು ಅವೈಜ್ಞಾನಿಕ. ಇಂತಹ ಪರಿಸ್ಥಿತಿ ಇರುವಾಗ ಆಯ್ಕೆ ಸಮಿತಿಯೇ ಅಪ್ರಸ್ತುತ. ಅರ್ಜಿದಾರರು ಈ ಬಗ್ಗೆ ನಮ್ಮಲ್ಲಿ ಕೋರಿದಾಗಳೂ ಅರ್ಹ ರಿಗೆ ಯೋಜನೆಯ ಪ್ರಯೋಜನೆ ತಲುಪಿಸಿ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಗಂಭೀರವಾಗಿ ಯೋಚಿಸಬೇಕು ಹಾಗೂ ಮೇಲಧಿಕಾರಿಗಳಿಗೆ ವರದಿ ಮಾಡಬೇಕು. ಇಂತಹ ಯೋಜನೆ ಗಳಲ್ಲಿ ಪ್ರತಿ ಯೋಜನೆಯಡಿಯಲ್ಲಿ ವರ್ಷಕ್ಕೆ ಕನಿಷ್ಠ 10 ಫಲಾನುಭವಿ ಗಳನ್ನು ಆಯ್ಕೆ ಗೆ ಅವಕಾಶ ವಿಲ್ಲದಿದ್ದರೆ ಆ ಯೋಜನೆ ಯನ್ನೇ ಸರಕಾರ ರದ್ದು ಪಡಿಸುವುದು ಉತ್ತಮ ಎಂದರು.
ಅಲ್ಲದೆ ಪ್ರತಿ ವರ್ಷ ಹೊಸದಾಗಿ ಅರ್ಜಿ ಸಲ್ಲಿಸುವ ಬದಲು ಈ ಹಿಂದೆ ನಿರ್ದಿಷ್ಟ ಯೋಜನೆಯಡಿ ಅರ್ಜಿ ಹಾಕಿ ಸೌಲಭ್ಯ ದೊರಕದೇ ಇರುವವರ ಅರ್ಜಿಗಳು ಮುಂದಿನ ವರ್ಷಗಳಲ್ಲಿ ಪರಿಗಣನೆಗೆ ಬರುವ ಹಾಗೆ ಆನ್ ಲೈನ್ ತಂತ್ರಾoಶದಲ್ಲಿ ಅಗತ್ಯ ಬದಲಾವಣೆ ಮಾಡಲು ಕ್ರಮ ವಹಿಸುವುದರ ಮೂಲಕ ಅರ್ಜಿದಾರರು ಸರಕಾರಿ ಸೌಲಭ್ಯ ಸಿಗುತ್ತವೆ ಎಂಬ ಆಸೆಯಿಂದ ದಾಖಲೆಗಳನ್ನು ಜೋಡಿಸಲು ಹಣ ಹಾಗೂ ಶ್ರಮ ವ್ಯರ್ಥವಾಗುವುದನ್ನು ತಪ್ಪಿಸುವಂತಾಗಬೇಕು ಎಂದರು.
ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮ, ಒಕ್ಕಲಿಗರ ನಿಗಮ ಹಾಗೂ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳು ಹಾಗೂ ಆಯ್ಕೆ ಸಮಿತಿಯ ಸದಸ್ಯರುಗಳು ಮತ್ತು ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.