ನವದೆಹಲಿ: 2002 ರಲ್ಲಿ ಪ್ರಾರಂಭವಾದಾಗಿನಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 7,72,000 ಕಿಲೋಮೀಟರ್ ರಸ್ತೆಗಳನ್ನು ನಿರ್ಮಿಸಲಾಗಿದೆ ಎಂದು ಸರ್ಕಾರ ಇಂದು ಹೇಳಿದೆ.
ಪ್ರಶ್ನೆಗಳಿಗೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ರಾಜ್ಯ ಸಚಿವ ಕಮಲೇಶ್ ಪಾಸ್ವಾನ್, ಈ ಯೋಜನೆಯ ಕಾರಣದಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ 1 ಲಕ್ಷ 63 ಸಾವಿರ ಜನವಸತಿಗಳಿಗೆ ರಸ್ತೆ ಸಂಪರ್ಕ ವಿಸ್ತರಿಸಿದೆ ಎಂದು ಹೇಳಿದರು.
ಈ ಯೋಜನೆಯ 4 ನೇ ಹಂತವು ದೇಶಾದ್ಯಂತ 25 ಸಾವಿರಕ್ಕೂ ಹೆಚ್ಚು ಜನವಸತಿಗಳಿಗೆ ರಸ್ತೆ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ರಸ್ತೆ ಸಂಪರ್ಕವಿಲ್ಲದ ಅನೇಕ ಸ್ಥಳಗಳಿರುವುದರಿಂದ ಈ ಹಂತವು ಅಗತ್ಯವಾಗಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.