ನವದೆಹಲಿ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಇಂದಿಗೆ ಒಂಬತ್ತು ವರ್ಷಗಳನ್ನು ಪೂರೈಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಯೋಜನೆಯನ್ನು 2016 ರಲ್ಲಿ ಪ್ರಾರಂಭಿಸಿದರು, ಇದು ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟ ಮತ್ತು ಹಾನಿಯನ್ನು ಅನುಭವಿಸುವ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದೆ.
ನವೀನ ಕೃಷಿ ಪದ್ಧತಿಗಳ ಅಳವಡಿಕೆಯನ್ನು ಉತ್ತೇಜಿಸುವುದರ ಜೊತೆಗೆ ರೈತರ ಆದಾಯವನ್ನು ಸ್ಥಿರಗೊಳಿಸುವಲ್ಲಿ ಈ ಯೋಜನೆ ನಿರ್ಣಾಯಕ ಪಾತ್ರ ವಹಿಸಿದೆ. ಯೋಜನೆಯ ಯಶಸ್ಸು ಮತ್ತು ಸಾಮರ್ಥ್ಯವನ್ನು ಗುರುತಿಸಿದ ನಂತರ, ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು 2025-26 ರವರೆಗೆ 69 ಸಾವಿರ 515 ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಒಟ್ಟು ಬಜೆಟ್ನೊಂದಿಗೆ ಮುಂದುವರಿಸಲು ಅನುಮೋದನೆ ನೀಡಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.