ನವದೆಹಲಿ: ದೇಶದಲ್ಲಿ ಸುಮಾರು 1 ಲಕ್ಷ 65 ಸಾವಿರ ಅಂಚೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಈ ಅಂಚೆ ಕಛೇರಿಗಳ ಪೈಕಿ ಸುಮಾರು 16 ಸಾವಿರ ಅಂಚೆ ಕಚೇರಿಗಳು ನಗರ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, 1 ಲಕ್ಷ 49 ಸಾವಿರಕ್ಕೂ ಹೆಚ್ಚು ಅಂಚೆ ಕಚೇರಿಗಳು ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದಿವೆ.
ಸಂವಹನ ಖಾತೆ ರಾಜ್ಯ ಸಚಿವ ಪೆಮ್ಮಸಾನಿ ಚಂದ್ರ ಶೇಖರ್ ಅವರು ಇಂದು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದರು.
ದೇಶದ ಎಲ್ಲಾ ಇಲಾಖಾ ಅಂಚೆ ಕಚೇರಿಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಹೇಳಿದ ಅವರು, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಅಡಿಯಲ್ಲಿ 1 ಲಕ್ಷ 63 ಸಾವಿರಕ್ಕೂ ಹೆಚ್ಚು ಅಂಚೆ ಕಚೇರಿಗಳು ಬ್ಯಾಂಕಿಂಗ್ ಮತ್ತು ಇತರ ಡಿಜಿಟಲ್ ಸೇವೆಗಳನ್ನು ಒದಗಿಸಲು ಸಕ್ರಿಯಗೊಳಿಸಲಾಗಿದೆ ಎಂದು ಸಚಿವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.