ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾರ್ಚ್ 27 ರಂದು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಕೆಲ್ಲಾಗ್ ಕಾಲೇಜಿನಲ್ಲಿ ಭಾಷಣದ ಮಾಡಿದ ವೇಳೆ ತೀವ್ರ ಪ್ರತಿಭಟನೆಗಳನ್ನು ಎದುರಿಸಬೇಕಾಗಿ ಬಂದಿದೆ. ಬಂಗಾಳಿ ಹಿಂದೂ ವಲಸೆಗಾರರು, ವಿದ್ಯಾರ್ಥಿ ಕಾರ್ಯಕರ್ತರು ಮತ್ತು ರಾಜಕೀಯ ವಿರೋಧಿಗಳು ಅವರ ಮೇಲೆ ಮುಗಿಬಿದ್ದಿದ್ದು, ಮಹಿಳೆಯರ ಮೇಲಿನ ಅಪರಾಧಗಳು, ಚುನಾವಣೆಯ ನಂತರದ ಹಿಂಸಾಚಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಹಿಂದೂ ಕಿರುಕುಳದ ಬಗ್ಗೆ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಪೋಸ್ಟರ್ ಪ್ರದರ್ಶಿಸಿದ್ದಾರೆ.
ಸಾಮಾಜಿಕ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣದ ಮೇಲೆ ಕೇಂದ್ರೀಕರಿಸಬಢಕಾಗಿದ್ದ ಈ ಕಾರ್ಯಕ್ರಮವು ಟಿಎಂಸಿ ನಾಯಕಿಯ ವಿರುದ್ಧದ ಆರೋಪಗಳು ಮತ್ತು ಘೋಷಣೆಗಳ ವೇದಿಕೆಯಾಗಿ ಮಾರ್ಪಟ್ಟಿತು.
ಲಂಡನ್ನಲ್ಲಿರುವ ಬಂಗಾಳಿ ಹಿಂದೂ ಸಮುದಾಯದ ಸದಸ್ಯರು ಹಾಗೂ ಭಾರತೀಯ ವಿದ್ಯಾರ್ಥಿ ಒಕ್ಕೂಟದ (SFI) ಯುಕೆ ಘಟಕವು ಪ್ರತಿಭಟನೆಯ ನೇತೃತ್ವ ವಹಿಸಿತ್ತು. ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜಿನಲ್ಲಿ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಮತ್ತು ಸಂದೇಶಖಾಲಿಯಲ್ಲಿ ಮಹಿಳೆಯರು ಎದುರಿಸಿದ ಲೈಂಗಿಕ ದೌರ್ಜನ್ಯಕ್ಕೆ ನ್ಯಾಯ ಒದಗಿಸಬೇಕೆಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. “ಹಿಂದೂಗಳ ನರಮೇಧ” ಮತ್ತು ತೃಣಮೂಲ ಕಾಂಗ್ರೆಸ್ ಆಡಳಿತದಲ್ಲಿ “ವ್ಯಾಪಕ ಭ್ರಷ್ಟಾಚಾರ”ವನ್ನು ಖಂಡಿಸುವ ಪೋಸ್ಟರ್ಗಳನ್ನು ಪ್ರದರ್ಶಿಸಲಾಯಿತು.
ಈ ಘಟನೆಯ ವೀಡಿಯೊವನ್ನು ಹಂಚಿಕೊಂಡ ಬಿಜೆಪಿ ನಾಯಕ ಅಮಿತ್ ಮಾಳವೀಯ, “ಲಂಡನ್ನ ಕೆಲ್ಲಾಗ್ ಕಾಲೇಜಿನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬಂಗಾಳಿ ಹಿಂದೂಗಳು ಎದುರಿಸಿದರು, ಆರ್ಜಿ ಕಾರ್ನಲ್ಲಿ ನಡೆದ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ, ಸಂದೇಶಖಾಲಿಯಲ್ಲಿ ಮಹಿಳೆಯರ ಮೇಲಿನ ಅಪರಾಧಗಳು, ಹಿಂದೂಗಳ ನರಮೇಧ ಮತ್ತು ವ್ಯಾಪಕ ಭ್ರಷ್ಟಾಚಾರಕ್ಕಾಗಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು” ಎಂದಿದ್ದಾರೆ.
ರಾಜ್ಯದಲ್ಲಿ ಹಿಂದೂ ಹಿತಾಸಕ್ತಿ ಮತ್ತು ಮಹಿಳೆಯರ ಸುರಕ್ಷತೆಯನ್ನು ರಕ್ಷಿಸುವಲ್ಲಿ ವಿಫಲರಾದ ಮಮತಾ ಬ್ಯಾನರ್ಜಿ “ಪಶ್ಚಿಮ ಬಂಗಾಳಕ್ಕೆ ಅವಮಾನ” ಎಂದಿದ್ದಾರೆ.
Bengali Hindus confront West Bengal Chief Minister Mamata Banerjee at Kellogg College in London, raising angry slogans calling her out for the rape and murder of the lady doctor at RG Kar, crimes against women in Sandeshkhali, the genocide of Hindus, and widespread corruption… pic.twitter.com/eT6JlOWYyZ
— Amit Malviya (@amitmalviya) March 27, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.