ಮೂಡಬಿದರೆ : ಕೊಲೆಗಿಡಾದ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪುಜಾರಿಯವರ ಮನೆಯವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಿಜೆಪಿಯಿಂದ 5 ಲಕ್ಷ ರೂ. ಸೇರಿದಂತೆ ಸಂಘ ಪರಿವಾರದ ವತಿಯಿಂದ ಜೊತೆಗೂಡಿ ರೂ.10 ಲಕ್ಷದ ಚೆಕ್ ವಿತರಿಸಲಾಯಿತು.
ಈ ಸಂದರ್ಭ ಆರ್.ಎಸ್.ಎಸ್ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ| ಕಲ್ಲಡ್ಕ ಪ್ರಭಾಕರ ಭಟ್, ವಿಹಿಂಪ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್ ಜಿ , ಸಂಸದ ನಳಿನ್ ಕುಮಾರ್ ಕಟೀಲು, ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಕೃಷ್ಣಮೂರ್ತಿ, ಬಜರಂಗದಳ ಪ್ರಾಂತ ಸಂಚಾಲಕ ಶರಣ್ ಪಂಪ್ವೆಲ್, ಪ್ರಾಂತ ಗೋ ರಕ್ಷಾ ಪ್ರಮುಖ್ ದಿನೇಶ ಪೈ, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ ಶೇಣವ, ಮುಂತಾದವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.