ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ್ ನಂತರ ಭಯೋತ್ಪಾದನೆಯ ವಿರುದ್ಧ ಭಾರತ ತಳೆದಿರುವ ಶೂನ್ಯ ಸಹಿಷ್ಣುತೆಯ ಸಂದೇಶವನ್ನು ಜಗತ್ತಿಗೆ ಸಾರಲು ಈ ತಿಂಗಳ ಕೊನೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಸೇರಿದಂತೆ ಪ್ರಮುಖ ಪಾಲುದಾರ ರಾಷ್ಟ್ರಗಳಿಗೆ ಸರ್ವಪಕ್ಷ ನಿಯೋಗವನ್ನು ಕಳುಹಿಸಲು ಸರ್ಕಾರ ನೀಡಿದ ಆಹ್ವಾನಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಶನಿವಾರ ಪ್ರತಿಕ್ರಿಯಿಸಿದ್ದಾರೆ.
“ಇತ್ತೀಚಿನ ಘಟನೆಗಳ ಕುರಿತು ನಮ್ಮ ರಾಷ್ಟ್ರೀಯ ದೃಷ್ಟಿಕೋನವನ್ನು ಪ್ರಸ್ತುತಪಡಿಸಲು ಐದು ಪ್ರಮುಖ ರಾಜಧಾನಿಗಳಿಗೆ ಸರ್ವಪಕ್ಷ ನಿಯೋಗವನ್ನು ಮುನ್ನಡೆಸಲು ಭಾರತ ಸರ್ಕಾರದ ಆಹ್ವಾನ ನೀಡಿರುವುದು ನನಗೆ ಗೌರವ ತಂದಿದೆ” ಎಂದು ತರೂರ್ X ಪೋಸ್ಟ್ ಮಾಡಿದ್ದಾರೆ.
ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳಲ್ಲಿ ಏಕತೆಯ ಮಹತ್ವವನ್ನು ಒತ್ತಿ ಹೇಳಿರುವ ತರೂರ್, “ರಾಷ್ಟ್ರೀಯ ಹಿತಾಸಕ್ತಿಯ ವಿಷಯದಲ್ಲಿ ನನ್ನ ಸೇವೆಯ ಅಗತ್ಯವಿದ್ದರೆ ನಾನೆಂದಿಗೂ ಹಿಂಜರಿಯುವುದಿಲ್ಲ. ಜೈ ಹಿಂದ್” ಎಂದಿದ್ದಾರೆ.
ಪಾಕಿಸ್ಥಾನ ನಡೆಸುತ್ತಿರುವ ಭಯೋತ್ಪಾದಕ ಕೃತ್ಯಗಳು ಮತ್ತು ಭಯೋತ್ಪಾದನೆಯ ಬಗ್ಗೆ ಭಾರತದ ಶೂನ್ಯ ಸಹಿಷ್ಣುತಾ ನೀತಿಯನ್ನು ತಿಳಿಸಲು ಸರ್ಕಾರವು ಏಳು ಸರ್ವಪಕ್ಷ ನಿಯೋಗಗಳನ್ನು ಪ್ರಮುಖ ಪಾಲುದಾರ ರಾಷ್ಟ್ರಗಳಿಗೆ ಕಳುಹಿಸಲಿದೆ.
I am honoured by the invitation of the government of India to lead an all-party delegation to five key capitals, to present our nation’s point of view on recent events.
When national interest is involved, and my services are required, I will not be found wanting.
Jai Hind! 🇮🇳 pic.twitter.com/b4Qjd12cN9
— Shashi Tharoor (@ShashiTharoor) May 17, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.