ಅಹಮದಾಬಾದ್: ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ (AI171) ಗುರುವಾರ ಮಧ್ಯಾಹ್ನ ಮೇಘನಿ ನಗರದಲ್ಲಿ ಅಪಘಾತಕ್ಕೀಡಾಗಿ 251 ಜನರು ಧಾರುಣವಾಗಿ ಸಾವಿಗೀಡಾದ ಘಟನೆ ಇಡೀ ದೇಶವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಿಗ್ಗೆ ಅಹಮದಾಬಾದ್ಗೆ ಆಗಮಿಸಿ ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಪ್ರಧಾನಿಯವರ ಜೊತೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು ಮತ್ತು ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಇದ್ದರು.
ನಂತರ ಪ್ರಧಾನಿಯವರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಿಕರು ಮತ್ತು ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾದರು.
ಈ ದುರಂತ ಘಟನೆಯಲ್ಲಿ ಸುಮಾರು 251 ಜನರು ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.
ಜೂನ್ 12 ರಂದು ಲಂಡನ್ನ ಗ್ಯಾಟ್ವಿಕ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI 171, ಅಹಮದಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿತ್ತು.
ಎಐ ವಿಮಾನದಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, ಏಳು ಪೋರ್ಚುಗೀಸ್ ಪ್ರಜೆಗಳು ಮತ್ತು ಒಬ್ಬ ಕೆನಡಾದ ಪ್ರಜೆ ಇದ್ದರು. ಪವಾಡಸದೃಶವಾಗಿ, ಒಬ್ಬ ವ್ಯಕ್ತಿ ಆ ಭೀಕರ ಅಪಘಾತದಿಂದ ಬದುಕುಳಿದರು. ವಿಮಾನಯಾನ ಸಂಸ್ಥೆಯ ಪ್ರಕಾರ, ಬದುಕುಳಿದ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ. ವಿಮಾನ ಹಾಸ್ಟೆಲ್ಗೆ ಡಿಕ್ಕಿ ಹೊಡೆದ ನಂತರ ಕನಿಷ್ಠ ಐದು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಕೆಲವು ವರದಿಗಳು ಉಲ್ಲೇಖಿಸಿವೆ.
ಈ ವಿಮಾನವನ್ನು 8,200 ಗಂಟೆಗಳ ಹಾರಾಟದ ಅನುಭವ ಹೊಂದಿರುವ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಮತ್ತು 1,100 ಗಂಟೆಗಳ ಹಾರಾಟದ ಅನುಭವ ಹೊಂದಿರುವ ಕ್ಲೈವ್ ಕುಂದರ್ ಹಾರಿಸುತ್ತಿದ್ದರು.
Ahmedabad | PM Modi visited the Air India plane crash site and assessed the ground situation today pic.twitter.com/ikJtzTcSvi
— ANI (@ANI) June 13, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.